ಮಂಗಳೂರು: ಸಚಿವ ನಾಗೇಂದ್ರ ತಲೆದಂಡಕ್ಕೆ ಆಗ್ರಹಿಸಿ ದ.ಕ.ಜಿಲ್ಲಾ ಬಿಜೆಪಿ ಯುವಮೋರ್ಚ ಪಿವಿಎಸ್ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿತು.
ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಹಾಗೂ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜಿನಾಮೆ ನೀಡಬೇಕೆಂದು 10 ನಿಮಿಷಗಳ ಕಾಲ ರಸ್ತೆ ತಡೆ ನಡೆಯಿತು. ಬಂಟ್ಸ್ ಹಾಸ್ಟೇಲ್ ಹಾಗೂ ನವಭಾರತ್ ಸರ್ಕಲ್ ಬಳಿಯಿಂದ ಬರುವ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಮಾನವ ಸರಪಣಿ ಮಾಡಿ ವಾಹನಗಳನ್ನು ತಡೆದರು.
ಈ ವೇಳೆ ಸಚಿವ ಬಿ.ನಾಗೇಂದ್ರರ ರಾಜಿನಾಮೆಗೆ ಆಗ್ರಹಿಸಿದ್ದಲ್ಲದೆ, ರಾಜ್ಯ ಕಾಂಗ್ರೆಸ್, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ವಿರುದ್ಧ ಘೋಷಣೆ ಕೂಗಿದರು.