ಮಂಗಳೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮಂಗಳೂರಿನಲ್ಲಿ ಎಎಸ್ ಐ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಂಗಳೂರುನಗರದ ಮಹಿಳಾ ಠಾಣೆಯಲ್ಲಿ ಎಎಸ್‌ಐ ಆಗಿದ್ದ ರಾಜೇಶ್ ಹೆಗ್ಡೆ (54) ಹೃದಯಾ ಘಾತದಿಂದ ನಿಧನರಾದರು. ಕಾಸರಗೋಡು ಜಿಲ್ಲೆಯ ಹೊಸದುರ್ಗ ಮೂಲದವರಾದ ಹೆಗ್ಡೆ, ಶನಿವಾರ ಮಧ್ಯಾಹ್ನ ಊಟಕ್ಕೆ ತೆರಳಿದ್ದ ವೇಳೆ ಮನೆಯಲ್ಲಿಯೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.