Friday, July 11, 2025
Google search engine

Homeಅಪರಾಧಮಂಗಳೂರು: ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು: ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಂಗ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿರುವ ಮಂಗಳೂರು ನಗರ ಪೊಲೀಸ್ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಂಧಿತ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಹಿದಾಯತ್ ಯಾನೆ ಅಬ್ದುಲ್ಲ ಎಂಬಾತನಾಗಿದ್ದು, ಠಾಣಾ ಅ.ಕ್ರ: 139/2007 ಕಲಂ: 366, 420, 120ಬಿ, 368 ಜೊತೆಗೆ 149 ಐ.ಪಿ.ಸಿ ಪ್ರಕರಣದ ವಿಚಾರಣೆಯ ವೇಳೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ಡಿಸೆಂಬರ್-2023 ರಿಂದ ತಲೆಮರೆಸಿಕೊಂಡಿದ್ದು, ಈತ ನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಗುರುವಾರ ಕೇರಳ – ಮಂಜೇಶ್ವರದಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಆ ಬಳಿಕ ನ್ಯಾಯಾಲಯದ ಅದೇಶವನ್ನು ಉಲ್ಲಂಘಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರ: 74/2025 ಕಲಂ: 269 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular