ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಜನವರಿ 4ರಂದು ಗುರುಪುರ ಕೈಕಂಬದ ಮೇಘಾ ಪ್ಲಾಝಾದಲ್ಲಿ ಹಮ್ಮಿಕೊಂಡಿರುವ ಮಂಗಳೂರು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಭಿತ್ರಿಪತ್ರ ಬಿಡುಗಡೆಯ ಮೂಲಕ ಸ್ಪೀಕರ್ ಯು.ಟಿ.ಖಾದರ್ ಪ್ರಚಾರಕ್ಕೆ ಇಂದು ಚಾಲನೆ ನೀಡಿದರು.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಹೆಚ್., ಸದಸ್ಯರಾದ ಮುಹಮ್ಮದ್ ಅಲಿ ಉಚ್ಚಿಲ್, ಯು. ಹೆಚ್. ಖಾಲಿದ್ ಉಜಿರೆ, ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಎಂ.ಜಿ. ಸಾಹುಲ್ ಹಮೀದ್, ಸಲೀಂ ಹಂಡೇಲ್ ಕಾರ್ಯದರ್ಶಿಗಳಾದ ಎಸ್.ಎಂ. ಅಝೀಝ್ ಕೈಕಂಬ, ಅಬ್ದುಲ್ ಜಲೀಲ್ ಅರಳ ಹಾಗೂ ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸದಸ್ಯ ಇಖ್ವಾನ್ ಅಹ್ಮದ್ ಉಪಸ್ಥಿತರಿದ್ದರು.



