ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ತಾಲೂಕಿನ ಚಂದಗಾಲು ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷೆಯಾಗಿ ಚರ‍್ನಹಳ್ಳಿ ಗ್ರಾಮದ ಸದಸ್ಯೆ ಮಣಿಯಮ್ಮ ಅವಿರೋಧವಾಗಿ ಆಯ್ಕೆಯಾದರು.
ಈವರೆಗೆ ಅಧ್ಯಕ್ಷೆಯಾಗಿದ್ದ ಮೀನಾಕ್ಷಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಗ್ರಾಮ ಪಂಚಾಯ್ತಿ ಆಡಳಿತ ಕಚೇರಿಯಲ್ಲಿ ಬುಧವಾರ ನಡೆದ ಚುನಾವಣೆಯಲ್ಲಿ ಮಣಿಯಮ್ಮ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದಿದ್ದರಿಂದ ಚುನಾವಣಾಧಿಕಾರಿಯಾಗಿದ್ದ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರೆ ವಿ.ಸುಮಿತ ಇವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು ೧೫ ಸದಸ್ಯರಿದ್ದು, ಚುನಾವಣಾ ಸಭೆಯಲ್ಲಿ ಉಪಾಧ್ಯಕ್ಷ ಸಿ.ಯು.ರಾಘವೇಂದ್ರ, ಸದಸ್ಯರಾದ ಮೀನಾಕ್ಷಿ, ರಾಜಮ್ಮ, ಬಿ.ಮಹದೇವ, ಹೆಚ್.ಎಸ್.ಮಲ್ಲೇಶ, ಕೆ.ಎಸ್.ನಿಶಾಂತ್, ಎಸ್.ಸೌಮ್ಯ, ನೇತ್ರಾವತಿ, ಪ್ರಕಾಶ, ಎಸ್.ರವಿ, ನೇತ್ರಾವತಿ, ಭಾಗ್ಯ, ಸುರೇಶ, ವಿ.ಆರ್.ರೂಪ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಜಿ.ಟಿ.ಸಂತೋಷ್ ಹಾಜರಿದ್ದರು.
ನೂತನ ಅಧ್ಯಕ್ಷೆ ಮಣಿಯಮ್ಮ ಮಾತನಾಡಿ ನನ್ನ ಅಧಿಕಾರದ ಅವಧಿಯಲ್ಲಿ ಪಂಚಾಯ್ತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಅವುಗಳ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಇದಕ್ಕೆ ಎಲ್ಲಾ ಸದಸ್ಯರು ಸಲಹೆ, ಸಹಕಾರ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ನೂತನ ಅಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಗ್ರಾಮ ಪಂಚಾಯ್ತಿ ಸದಸ್ಯರು, ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿ ಸಂಭ್ರಮಿಸಿದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ, ಗಾರೆಮೇಸ್ತಿç ಮಹದೇವ ಮತ್ತಿತರರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.