Saturday, July 5, 2025
Google search engine

Homeರಾಜ್ಯನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ...

ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ ೩೭೦ ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡಬೇಕ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನಾನು ಫೈಟ್ ಮಾಡುತ್ತೇನೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಣೆ ನೀಡಿದರು.

ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಿಳಿಸಿದರು. ನಾನು ಹೋರಾಟದ ಹಿನ್ನೆಲೆಯಿಂದ ಬಂದಿರುವಂತಹವನು.ಸುಳ್ಳು ಆರೋಪಗಳಿಗೆ ಯಾವತ್ತು ಹೆದರಲ್ಲ ಅವುಗಳನ್ನು ಎಲ್ಲಾ ಎದರಿಸುತ್ತೇವೆ. ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆ ಬಂದಿಲ್ಲ ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular