ಪಂಜಾಬ್: ಪಂಜಾಬ್‌ನ ಮುಕ್ತಸರ್ ಸಾಹಿಬ್ ಜಿಲ್ಲೆಯ ಲಂಬಿ ಗ್ರಾಮದ ಬಳಿ ಇರುವ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ತಡರಾತ್ರಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆಯಾಗುವ ವೇಳೆಗೆ ಕಾರ್ಖಾನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಎರಡು ಮಹಡಿಯ ಕಟ್ಟಡವೊಂದರ ಭಾಗ ಕುಸಿದಿದೆ. ಹಲವರು ಅವಶೇಷಗಳಡಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಗಾಯಾಳುಗಳನ್ನು ಬಟಿಂಡಾ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕಾರ್ಮಿಕ ಅರುಣ್ ಅವರ ಪ್ರಕಾರ, ರಾತ್ರಿ ಪಾಳಿಯ ಕೆಲಸ ಮುಗಿಸಿ ಮಲಗಿದ ಕೆಲವೇ ಹೊತ್ತಿನಲ್ಲಿ ಸ್ಫೋಟ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ನಾಲ್ವರ ಮೃತದೇಹಗಳನ್ನು ಹೊರತೆಗೆದು, ಕಾನೂನು ಕ್ರಮ ಕೈಗೊಂಡಿದ್ದಾರೆ.
ಕಾರ್ಖಾನೆಯ ದಾಖಲೆಗಳು ಕಾನೂನುಬದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖೆ ಮುಂದುವರಿದಿದೆ.