Friday, May 22, 2026
Google search engine

Homeರಾಜ್ಯಮೇಕೆದಾಟು ಡಿಪಿಆರ್ ಸಿದ್ಧ ; ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ : ಡಿ.ಕೆ.ಶಿವಕುಮಾರ್

ಮೇಕೆದಾಟು ಡಿಪಿಆರ್ ಸಿದ್ಧ ; ಶೀಘ್ರದಲ್ಲೇ ಕೇಂದ್ರಕ್ಕೆ ಸಲ್ಲಿಕೆ : ಡಿ.ಕೆ.ಶಿವಕುಮಾರ್

ಮೈಸೂರು : ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸಮಗ್ರ ಯೋಜನಾ ವರದಿ (DPR) ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮಧ್ಯರಂಗ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಅನುಮೋದನೆ ದೊರೆತ ತಕ್ಷಣ ಯೋಜನೆಗೆ ಶಿಲಾನ್ಯಾಸ ನೆರವೇರಿಸಲಾಗುವುದು ಎಂದಿದ್ದಾರೆ.

ಇನ್ನು ಯೋಜನೆಗಾಗಿ ಈಗಾಗಲೇ ಪ್ರತ್ಯೇಕ ಕಚೇರಿ ಆರಂಭಿಸಲಾಗಿದ್ದು, ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಭೂಮಿಯನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ DPR ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಈ ಯೋಜನೆಗೆ ತಮಿಳುನಾಡಿಗೆ ವಿರೋಧಿಸುವ ಹಕ್ಕಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನವನ್ನು ಕೇಂದ್ರ ಜಲ ಆಯೋಗವೇ ಕೈಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಈಗಾಗಲೇ ಸೂಚಿಸಿದೆ ಎಂದು ಹೇಳಿದರು.

ಇದೇ ವೇಳೆ ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತ ಕುರಿತು ಮಾತನಾಡಿದ ಅವರು, ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದರು. “ಭೂ ಗ್ಯಾರಂಟಿ” ಯೋಜನೆಯನ್ನು ಆರನೇ ಗ್ಯಾರಂಟಿಯಾಗಿ ಜಾರಿಗೆ ತರಲಾಗಿದ್ದು, ಮನೆ ಮಾಲೀಕರ ಹಾಗೂ ಆಸ್ತಿಯ ಛಾಯಾಚಿತ್ರ ಹೊಂದಿರುವ ದಾಖಲೆಗಳನ್ನು ಮನೆಮನೆಗೆ ತಲುಪಿಸುವ ಕಾರ್ಯ ನಡೆಯುತ್ತಿದೆ ಎಂದರು.

ಇಷ್ಟಲ್ಲದೆ ಮುಂದಿನ ಎರಡು ವರ್ಷಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದ ಅವರು, ಈ ವರ್ಷ ಮಳೆಯ ಕೊರತೆ ಉಂಟಾಗುವ ಸಾಧ್ಯತೆ ಹಿನ್ನೆಲೆ ರೈತರ ರಕ್ಷಣೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಸರ್ಕಾರ ಮುನ್ನೆಚ್ಚರಿಕಾ ಚರ್ಚೆ ಆರಂಭಿಸಿದೆ ಎಂದು ಹೇಳಿದರು.

ಚಾಮರಾಜನಗರಕ್ಕೆ ಭೇಟಿ ನೀಡಿದ ನಾಯಕರು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆಯನ್ನು ತಳ್ಳಿಹಾಕಿದ ಅವರು, ಚಾಮರಾಜನಗರ ಐತಿಹಾಸಿಕ ಮತ್ತು ಪವಿತ್ರ ನೆಲ. ಭಕ್ತಿ ಇರುವಲ್ಲಿ ದೇವರು ಇರುತ್ತಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular