ಮಡಿಕೇರಿ : ನಾಡಿನ ಜೀವನದಿ, ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಮಂಗಳವಾರ ಭೇಟಿ ನೀಡಿ ಮಳೆಗಾಗಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.
ಕಾವೇರಿಗೆ ಸಂಕಲ್ಪ ಕುಂಕುಮಾರ್ಚನೆ ಮೂಲಕ ವಿಶೇಷೆ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು ಅವರು ನೆರವೇರಿಸಿದರು.
ನಾಡಿನಲ್ಲಿ ಉತ್ತಮ ಮಳೆಯಾಗಿ ಸುಭೀಕ್ಷೆ ತರುವಂತಾಗಬೇಕು. ಹೆಚ್ಚಿನ ಮಳೆಯಿಂದ ಕೃಷಿ ಚಟುವಟಿಕೆ ಗರಿಗೆದರಬೇಕು. ಉತ್ತಮ ಮಳೆಯಾಗಿ ಆಹಾರ ಬೆಲೆಗಳು ಇಳಿಕೆ ಆಗಬೇಕು ಎಂದು ಸಚಿವರು ವಿಶೇಷ ಪ್ರಾಥನೆ ಸಲ್ಲಿಸಿದರು.
ಇದೇ ಮೊದಲ ಬಾರಿಗೆ ತಲಕಾವೇರಿಗೆ ಭೇಟಿ ನೀಡಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧವಾಗಲಿ ಎಂದು ತಾಯಿ ಕಾವೇರಿ ಮಾತೆಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಶಾಸಕರಾದ ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಡಾ.ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಇತರರು ಇದ್ದರು.