ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮರಗಳ ಸುತ್ತ ಹಾಕಿರುವ ಕಾಂಕ್ರೀಟ್ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಮರಗಳ ಸುತ್ತ 1 ಮೀಟರ್ ಕಾಂಕ್ರೀಟ್ ಹಾಕುವಂತಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಸೇರಿದಂತೆ ಹಲವು ಕಡೆ ಮರಗಳ ಬುಡಕ್ಕೆ ಕಾಂಕ್ರೀಟ್ ಹಾಕಲಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಮರಕ್ಕೆ ಕಾಂಕ್ರೀಟ್ ಹಾಕುವುದನ್ನು ನಿಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆಗೆ ವೃಕ್ಷ ವೈದ್ಯ ವಿಜಯ್ ನಿಶಾಂತ್ ಪತ್ರ ಬರೆದಿದ್ದರು. ಇದರ ಬೆನ್ನಲ್ಲೆ ಕಾಂಕ್ರೀಟ್ ತೆರವುಗೊಳಿಸುವಂತೆ ಆದೇಶ ಹೊರಡಿಸಲಾಗಿದೆ.