ವರದಿ :ಸ್ಟೀಫನ್ ಜೇಮ್ಸ್.
ಬೆಳಗಾವಿ: ನಾಳೆಯಿಂದ ಆರಂಭವಾಗಲಿರುವ ಅಧಿವೇಶನದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಬೆಳಗಾವಿಗೆ ಆಗಮಿಸಿದರು. ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂಗೆ ಸಚಿವರಾದ ಕೆ ಜೆ ಜಾರ್ಜ್, ಎಚ್ ಸಿ ಮಹಾದೇವಪ್ಪ ಹಾಗೂ ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ಅವರನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಶಾಸಕ ಆಸೀಫ್ ಸೇರ್, ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸ್ವಾಗತಿಸಿದರು. ಬಳಿಕ ಸಿದ್ದರಾಮಯ್ಯ ಅವರು ಪೊಲೀಸ್ ಗೌರವ ವಂದನೆ ಸ್ವೀಕರಿಸಿ, ಪ್ರವಾಸಿ ಮಂದಿರಕ್ಕೆ ತೆರಳಿದರು.



