ಚಾಮರಾಜನಗರ: ಕಲೆ, ಸಂಸ್ಕøತಿ, ಪರಂಪರೆ ಬಿಂಬಿಸುವ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮಕ್ಕಳು ಆಸಕ್ತಿ ಹೊಂದಬೇಕು ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು. ನಗರದ ಮಲ್ಲಯ್ಯನಪುರದ ಆದರ್ಶ ವಿದ್ಯಾಲಯದಲ್ಲಿಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಏರ್ಪಾಡಾಗಿದ್ದ ಚಿಗುರು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜನಪದ ಕಲೆಗಳ ತವರೂರು ಎನಿಸಿರುವ ಚಾಮರಾಜನಗರ ಜಿಲ್ಲೆ ಕಲಾ ಪರಂಪರೆಗೆ ಪ್ರಸಿದ್ದಿಯಾಗಿದೆ. ಮಲೆ ಮಹದೇಶ್ವರ, ಬಿಳಿಗಿರಿರಂಗನಾಥಸ್ವಾಮಿ ಸೇರಿದಂತೆ ಹಲವು ಪ್ರಸಿದ್ದ ಇತಿಹಾಸ ಹೊಂದಿರುವ ಜಿಲ್ಲೆಯಲ್ಲಿ ಕಲೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಇಂತಹ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿಯೂ ಹೆಚ್ಚು ತೊಡಗಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಈ ಹಿಂದೆ ನಾಟಕ ಪ್ರದರ್ಶನ ಗ್ರಾಮಾಂತರ ಭಾಗಗಳಲ್ಲಿ ವ್ಯಾಪಕವಾಗಿ ನಡೆಯುತ್ತಿದ್ದವು. ಕಲಾ ಪ್ರದರ್ಶನದ ಪ್ರಮುಖ ಭಾಗವಾಗಿದ್ದ ನಾಟಕಗಳ ವೀಕ್ಷಣೆ ಹೆಚ್ಚಾಗಿತ್ತು. ಬದಲಾದ ಕಾಲದಲ್ಲಿ ನಾನಾ ಪ್ರಕಾರಗಳ ಕಲೆ ಅಭಿವ್ಯಕ್ತಿಸುವ ಅವಕಾಶಗಳು ಲಭಿಸುತ್ತಿವೆ. ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಹಕಾರಿಯಾಗಿವೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ಶಿಕ್ಷಣಾಧಿಕಾರಿ ಲಕ್ಷ್ಮೀಪತಿ ಅವರು ಮಾತನಾಡಿ ವಿದ್ಯಾಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಒಳ್ಳೆಯ ಹವ್ಯಾಸ ರೂಢಿಸಿಕೊಳ್ಳಬೇಕು. ಮೊಬೈಲ್ ಅವಲಂಬನೆ ಕಡಿಮೆ ಮಾಡಬೇಕು. ಸಂಗೀತ, ನಾಟಕ, ಇನ್ನಿತರ ಸದಭಿರುಚಿಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವೀಕ್ಷಣೆ ಮಾಡಬೇಕು. ವ್ಯಾಸಂಗದ ಜೊತೆಯಲ್ಲಿಯೇ ಕಲೆ ಚಟುವಟಿಕೆಗಳತ್ತಲೂ ಗಮನ ಹರಿಸಬೇಕು ಎಂದು ಸಲಹೆ ಮಾಡಿದರು.
ವಿದ್ಯಾರ್ಥಿಗಳು ನೃತ್ಯ ರೂಪಕ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಲಿಂಗಯ್ಯ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.