Thursday, February 5, 2026
Google search engine

Homeಅಪರಾಧಕಾನೂನುಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು..!

ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು..!

ಬೆಂಗಳೂರು : ಅಕ್ರಮ ಹಣ ವರ್ಗಾವಣೆ ಸಂಬಂಧ ಜಾರಿ‌ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಹೈಕೋರ್ಟ್‌ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ.

ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೈಕೋರ್ಟ್‌ ತಿಳಿಸಿದೆ. ಲಿವರ್ ಕಸಿ ಕುರಿತು 2 ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು. ಎಂಟು ವಾರಗಳಿಗೊಮ್ಮೆ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು‌ ಕೋರ್ಟ್‌ ನಿರ್ದೇಶನ ನೀಡಿದೆ.

ಪ್ರಾಸಿಕ್ಯೂಷನ್ ಸಾಕ್ಷ್ಯದ ಮೇಲೆ ಪ್ರಭಾವ ಬೀರಬಾರದು. ವಿಚಾರಣಾ ನ್ಯಾಯಾಲಯ ವಿಚಾರಣೆಗೆ ತೊಂದರೆ ಉಂಟು ಮಾಡಬಾರದು. ಐದು ಲಕ್ಷ ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಒಂದು ಭದ್ರತಾ ಖಾತರಿ ಒದಗಿಸಬೇಕು ಎಂದು ಹೈಕೋರ್ಟ್‌ ಷರತ್ತು ವಿಧಿಸಿದೆ.

RELATED ARTICLES
- Advertisment -
Google search engine

Most Popular