ಹೊಸದಿಲ್ಲಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ಮತ್ತು ರೈಲು ನಿಲ್ದಾಣಗಳು, ಕ್ರೀಡಾ ಮೈದಾನಗಳು ಮತ್ತು ಇತರ ಸಾರ್ವಜನಿಕ ಸ್ಥಳಗಳ ಬಳಿ ಇರುವ ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್.ವಿ. ಅಂಜಾರಿಯಾ ಅವರ ಪೀಠವು ಪ್ರಾಣಿಗಳನ್ನು ಸೆರೆಹಿಡಿದ ಸ್ಥಳಗಳಿಗೆ ಮತ್ತೆ ತಂದು ಬಿಡಬಾರದು ಎಂದು ಹೇಳಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಕ್ರೀಡಾ ಸಂಕೀರ್ಣಗಳನ್ನು ಗುರುತಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಇದಲ್ಲದೆ ಎಲ್ಲಾ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಕ್ರೀಡಾ ಮೈದಾನಗಳಿಗೆ ಬೀದಿ ನಾಯಿಗಳು ಪ್ರವೇಶಿಸುವುದಂತೆ ಸರಿಯಾಗಿ ಬೇಲಿ ಹಾಕಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳಿಗೆ ಸೂಚಿಸಿದೆ.



