ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ್ದ ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ಬೇಡಿಕೆಗಳ ಕುರಿತು ಅಹವಾಲು ಸಲ್ಲಿಸಿದ್ದಾರೆ.
ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಬೆಳ್ತಂಗಡಿ, ಸುಳ್ಯ ಮುಂತಾದ ಪ್ರದೇಶಗಳಿಂದ ಬಂದಿದ್ದ ಕೃಷಿಕರು ಎದುರಿಸುತ್ತಿರುವ ಅಡ್ಡಿ-ಆತಂಕವನ್ನು ಸಂಸದರ ಮುಂದೆ ತೋಡಿಕೊಂಡರು. ಇದಕ್ಕೆ ಸಂಸದರು ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ನೀಡಿದರು.
ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ, ರೈಲ್ವೆ ಇಲಾಖೆ, ಹೆದ್ದಾರಿ ಇಲಾಖೆ ಸೇರಿದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವಾರು ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದ ಕೆಲವು ಸಮಸ್ಯೆ-ಬೇಡಿಕೆಗಳ ಬಗ್ಗೆಯೂ ಜನರು ಸಂಸದರ ಗಮನಕ್ಕೆ ತಂದಿದ್ದಾರೆ. ಇನ್ನು ಕೆಲವೊಂದು ಸಮಸ್ಯೆಗಳನ್ನು ಆಲಿಸಿದ ಸಂಸದ ಚೌಟ ಅವರು ಸ್ಥಳದಲ್ಲೇ ಪರಿಹಾರ ಒದಗಿಸಿದ್ದಾರೆ.
- ಶಂಶೀರ್ ಬುಡೋಳಿ



