ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರನ್ನು ಇಡಿ ತನ್ನ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಇದೀಗ ಮುಡಾದ ಮತ್ತೊಂದು ಹಗರಣ ಬಯಲಾಗಿದ್ದು, ವಕ್ರತುಂಡ ಸೊಸೈಟಿಗೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ.
ಮೈಸೂರಿನಲ್ಲಿ ವಕ್ರತುಂಡ ಸೊಸೈಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಇಡಿ ತನಿಖೆಯಲ್ಲಿ ಅಕ್ರಮ ನಡೆದಿರುವುದು ಬಹಿರಂಗವಾಗಿದೆ. ಮುಡಾ ಮಾಜಿ ಅಧ್ಯಕ್ಷ ದಿನೇಶ್ ಕುಮಾರ್ ವಿರುದ್ಧ ಈ ಒಂದು ಆರೋಪ ಕೇಳಿಬಂದಿದ್ದು, 400 ಕೋಟಿ ರೂಪಾಯಿ ಮೌಲ್ಯದ 252 ಸೈಟ್ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ವಕ್ರತುಂಡ ಸೊಸೈಟಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾವಣೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಹಾಗಾಗಿ ಇದೀಗ ಇಡಿ ಅಧಿಕಾರಿಗಳು ಮಾಜಿ ಆಯುಕ್ತ ದಿನೇಶ್ ಕುಮಾರ್ ತೀವ್ರ ವಿಚಾರಣೆಗೆ ಒಳಪಡಿಸಿದೆ.