Saturday, July 19, 2025
Google search engine

Homeಅಪರಾಧಬಹುಕೋಟಿ ವಂಚನೆ ಪ್ರಕರಣ: ಮಂಗಳೂರು ಪೊಲೀಸರಿಂದ ಆರೋಪಿತ ರೋಶನ್ ಸಲ್ಡಾನ ಬಂಧನ

ಬಹುಕೋಟಿ ವಂಚನೆ ಪ್ರಕರಣ: ಮಂಗಳೂರು ಪೊಲೀಸರಿಂದ ಆರೋಪಿತ ರೋಶನ್ ಸಲ್ಡಾನ ಬಂಧನ

ಮಂಗಳೂರು (ದಕ್ಷಿಣ ಕನ್ನಡ): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರೋಶನ್ ಸಲ್ಡಾನ (43) ಎಂದು ಗುರುತಿಸಲಾಗಿದೆ.
ಆರೋಪಿತನ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 22/2025 ಕಲಂ: 316(2), 316(5) 318(2), 318(3) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ ಹಾಗೂ ಅಪರಾಧ ಕ್ರಮಾಂಕ:30/2025 ಕಲಂ:316(2), 316(5), 318(2), 318 (3), 61(2) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆಯಂತೆ ವಂಚನೆ ಪ್ರಕರಣಗಳು ದಾಖಲಾಗಿದೆ. ಈ ಪ್ರಕರಣದಲ್ಲಿ ಆರೋಪಿತನು ಆತನ ಮನೆಯಲ್ಲಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡು ಆರೋಪಿತನ ಮನೆಯ ಅಡಗುತಾಣದಲ್ಲಿ ಪತ್ತೆಯಾಗಿದ್ದಾನೆ.

ಪೊಲೀಸರು ಪರಿಶೀಲಿಸಿದಾಗ ಆರೋಪಿತನು ತನ್ನ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ರೂ 6,72,947/- ಮೌಲ್ಯದ ದೇಶಿ ಮತ್ತು ವಿದೇಶಿ ಮದ್ಯ ದೊರೆತಿದ್ದು, ನಂತರ ಸದ್ರಿ ಮಧ್ಯವನ್ನು ಮುಂದಿನ ಕ್ರಮದ ಬಗ್ಗೆ ಸ್ವಾಧೀನಪಡಿಸಿಕೊಂಡು ಸೆನ್ ಕ್ರೈಂ ಪೊಲೀಸ್ ಠಾಣಾ ಅ.ಕ್ರ. 39/2025 ಅಬಕಾರಿ ಕಾಯ್ದೆಯಂತೆ ಪ್ರಕರಣವನ್ನು ದಾಖಲಿಸಿಕೊಂಡು ಆರೋಪಿತನ ದಸ್ತಗಿರಿ ಮಾಡಲಾಗಿದೆ. ಹಾಗೂ ಆರೋಪಿತನ ಮನೆಯಿಂದ ದಾಖಲಾತಿಗಳನ್ನು, ಖಾಲಿ ಚೆಕ್ ಗಳನ್ನು ಹಾಗೂ ಸುಮಾರು 667 ಗ್ರಾಂ ಚಿನ್ನಭಾರಣಗಳು ಮತ್ತು ಅಂದಾಜು 2.75 ಕೋಟಿ ಮೌಲ್ಯದ ವಜ್ರದ ಉಂಗುರವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಆರೋಪಿತನ ವಿರುದ್ದ ಚಿತ್ರದುರ್ಗ, ಮುಂಬೈ ಸೇರಿದಂತೆ ವಿವಿಧೆಡೆ ವಂಚನೆ ಪ್ರಕರಣಗಳು ದಾಖಲಾಗಿರುತ್ತವೆ.

ಆರೋಪಿತನು ಇತರರೊಂದಿಗೆ ಸೇರಿ ಅವಶ್ಯಕತೆ ಇರುವ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಮೋಸ ಮಾಡುತ್ತಿದ್ದು, ಕಳೆದ 03 ತಿಂಗಳಲ್ಲಿ ಆರೋಪಿತನ ವ್ಯವಹಾರ ಪರಿಶೀಲಿಸಿದಾಗ ಇತನು ಗೋವಾ, ಬೆಂಗಳೂರು, ಪುಣೆ, ವಿಜಯಪುರ, ತುಮಕೂರು, ಕಲ್ಕತ್ತಾ, ಸಾಂಗ್ಲಿ, ಲಕ್ನೋ ,ಬಾಗಲಕೋಟೆ ಇತ್ಯಾದಿ ಕಡೆಗಳಲ್ಲಿ ಉದ್ದಿಮೆದಾರರಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಸುಮಾರು 32 ಕೋಟಿ ರೂಗಳನ್ನು ಆರೋಪಿ ಮತ್ತು ಇತರರು ಪಡೆದುಕೊಂಡಿರುವುದು ಕಂಡುಬಂದಿರುತ್ತದೆ. ಆರೋಪಿತನನ್ನು ಈ ದಿನ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

RELATED ARTICLES
- Advertisment -
Google search engine

Most Popular