ಹಾಸನ : ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶ್ರೀ ಹಾಸನಾಂಬ ದೇವಿ ದರ್ಶನ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನಲೆಯಲ್ಲಿ ಇಂದು ದೇವಾಲಯಕ್ಕೆ ಭೇಟಿ ನೀಡಿ ಸಿದ್ದತೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಕೆಲವು ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ಸಂಸದರಾದ ಶ್ರೇಯಸ್ ಎಂ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಟೇಲ್ ಶಿವಪ್ಪ, ಡಿ.ಐ.ಜಿ. ಬೋರಲಿಂಗಯ್ಯ, ಜಿಲ್ಲಾಧಿಕಾರಿ ಲತಾ ಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತ, ಉಪ ವಿಭಾಗಾಧಿಕಾರಿ ಮಾರುತಿ ಮತ್ತಿತರರು ಹಾಜರಿದ್ದರು.