Thursday, October 2, 2025
Google search engine

Homeಸ್ಥಳೀಯಮೈಸೂರು ದಸರಾ: ನಂದಿಧ್ವಜ ಪೂಜೆ, ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಮೈಸೂರು ದಸರಾ: ನಂದಿಧ್ವಜ ಪೂಜೆ, ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಕೊನೆ ಹಂತಕ್ಕೆ ಬಂದು ನಿಂತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ್ದಾರೆ.

ಹಲವು ದಿನಗಳಿಂದ ಬಹು ನಿರೀಕ್ಷೆಯಿಂದ ಕಾದು ಕುಳಿತಿದ್ದ ಜಂಬೂಸವಾರಿ ವೀಕ್ಷಿಸಲು ದೇಶ ವಿದೇಶಗಳಿಂದ ಹಲವಾರು ಜನರು ಮೈಸೂರಿಗೆ ಬಂದಿದ್ದಾರೆ. ಇದೀಗ ದಸರಾ ಉತ್ಸವ ಮತ್ತಷ್ಟು ವೈಭೋಗದಿಂದ ನಡೆಯಲಿದ್ದು, ತಾಯಿ ಚಾಮುಂಡಿ ದೇವಿಯನ್ನು ಹೊತ್ತು ಗಜಪಡೆ ಜಂಬೂಸವಾರಿ ನಡೆಸಲಿದೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 1ರಿಂದ 1.18ರ ಶುಭ ಧನುರ್ ಲಗ್ನದ ಮುಹೂರ್ತದಲ್ಲಿ ನಂದಿಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿದ್ದಾರೆ

ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಹೆಚ್.ಸಿ. ಮಹದೇವಪ್ಪ ಹಾಗೂ ಇನ್ನಿತರೆ ಸಚಿವರು ಉಪಸ್ಥಿತರಿದ್ದರು.

ನಂತರ ಕುಂಭ ಲಗ್ನದಲ್ಲಿ ಸಂಜೆ 4.42ರಿಂದ 5.06ರೊಳಗಿನ ಶುಭ ಮುಹೂರ್ತದಲ್ಲಿ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಗೆ ಸಿಎಂ ಪುಷ್ಪಾರ್ಚನೆ ಮಾಡಲಿದ್ದಾರೆ. ಅದೇ ಸಮಯಕ್ಕೆ 21 ಬಾರಿ ಕುಶಾಲತೋಪು ಸಿಡಿಸುವ ಕಾರ್ಯ, ಆನಂತರ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳ ಮೆರವಣಿಗೆ ನಡೆಯಲಿದೆ.

ಇದಕ್ಕೂ ಮುನ್ನ ನವರಾತ್ರಿಯ ಕೊನೆಯ ದಿನವಾದ ಇಂದು ಬೆಳಗ್ಗೆ ಅರಮನೆಯಲ್ಲಿ ವಿಜಯ ದಶಮಿಯ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳನ್ನು ರಾಜ ವಂಶಸ್ಥ ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ನೆರವೇರಿಸಿದರು.

ಬಳಿಕ ಕಲ್ಯಾಣ ಮಂಟಪದಲ್ಲಿ ಖಾಸಾ ಆಯುಧಗಳಿಗೆ ಪೂಜೆ ಸಲ್ಲಿಸಿದರು. ಚಿನ್ನ ಲೇಪಿತ ಪಲ್ಲಕ್ಕಿಯಲ್ಲಿ ಖಾಸಾ ಆಯುಧಗಳನ್ನು ಇಟ್ಟು ಅರಮನೆಯಿಂದ ಭುವನೇಶ್ವರಿ ದೇವಾಲಯದವರೆಗೆ ರಾಜಪರಂಪರೆಯಂತೆ ವಿಜಯ ದಶಮಿ ಮೆರವಣಿಗೆ ಹೊರಟು, ಅಲ್ಲಿ ಶಮಿ ಪೂಜೆ ನೆರವೇರಿಸಲಾಯಿತು. ಬಳಿಕ ರಾಜವಂಶಸ್ಥರು ಅರಮನೆಗೆ ವಾಪಸ್ ಆದರು. ಆ ಮೂಲಕ ನವರಾತ್ರಿಯ 10 ದಿನಗಳ ಧಾರ್ಮಿಕ ಕೈಂಕರ್ಯಗಳು ಪೂರ್ಣಗೊಂಡಿವೆ. ಈ ವೇಳೆ ಸವಾರಿ ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗವನ್ನು ರಾಜ ವಂಶಸ್ಥರು ವೀಕ್ಷಿಸಿದರು.

RELATED ARTICLES
- Advertisment -
Google search engine

Most Popular