Wednesday, May 21, 2025
Google search engine

Homeಸ್ಥಳೀಯಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ: ಪರಿಶೀಲನೆ

ಕೆಂಪಸಿದ್ದನ ಹುಂಡಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ: ಪರಿಶೀಲನೆ

ಮೈಸೂರು: ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ ಅವರು ಇಂದು ನಂಜನಗೂಡು ತಾಲೂಕಿನ ಕೆಂಪ ಸಿದ್ದನ ಹುಂಡಿ ಗ್ರಾಮಕ್ಕೆ ಭೇಟಿ ನೀಡಿ, ಕಂದಾಯ ಗ್ರಾಮ ರಚನೆ ಮತ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಗ್ರಾಮದ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮಾಡಿದರು.

ಈ ವೇಳೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ರೈತರಿಗೆ ನೀಡುವ ವಿವಿಧ ಕೃಷಿ ಸಲಕರಣೆಗಳ ವಿತರಣೆ ಕುರಿತು ಮಾಹಿತಿ ಪಡೆದರು ಹಾಗೂ ಅಟಲ್ ಜಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ಉಪವಿಭಾಗಾಧಿಕಾರಿಗಳಾದ ರಕ್ಷಿತ್, ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್,ಡಿಡಿ ಎಲ್ ಆರ್ ರಮ್ಯಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular