Thursday, May 29, 2025
Google search engine

Homeಸ್ಥಳೀಯಮೈಸೂರು: ನಾಲ್ವರು ದ್ವಿಚಕ್ರ  ವಾಹನ ಕಳ್ಳರ ಬಂಧನ

ಮೈಸೂರು: ನಾಲ್ವರು ದ್ವಿಚಕ್ರ  ವಾಹನ ಕಳ್ಳರ ಬಂಧನ

ಮೈಸೂರು: ಮೇಟಗಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ದ್ವಿಚಕ್ರ  ವಾಹನ ಕಳ್ಳರನ್ನು ಬಂಧಿಸಿದ್ದಾರೆ.

ಬಂಧಿತರಿಂದ 6 ಲಕ್ಷ ರೂಪಾಯಿ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.

ಆರೋಪಿಗಳು ಮೈಸೂರು, ಮಂಡ್ಯ, ಹಾಸನ ಜಿಲ್ಲೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದರು. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರದಕರಣ ದಾಖಲಾಗಿದ್ದು ಆರೋಪಿಗಳು ಅರೆಸ್ಟ್ ಆಗಿದ್ದಾರೆ.

ಮೇಟಗಳ್ಳಿ ಠಾಣೆಯ 2, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ 2, ಕೆಆರ್​ಎಸ್ ನ 1, ಪಾಂಡವಪುರದ 2, ಮೇಲುಕೋಟೆ 1, ಹಾಸನದ ಎಕ್ಸ್ ಟೆನ್ಷನ್ ಠಾಣೆಯ 1 ಪ್ರಕರಣ ಸೇರಿದಂತೆ ಒಟ್ಟು 9 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಬೆಳಕಿಗೆ ಬಂದಿವೆ.

ನಂಬರ್ ಪ್ಲೇಟ್ ಇಲ್ಲದ ಎರಡು ದ್ವಿಚಕ್ರ ವಾಹನಗಳಲ್ಲಿ ಇಬ್ಬರು ಆರೋಪಿಗಳು ಬರುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ನೀಡಿದ ಸುಳಿವಿನ ಮೇರೆಗೆ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular