Sunday, May 25, 2025
Google search engine

Homeಸ್ಥಳೀಯಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪಕ್ಷದ ಮುಖಂಡರು, ಬೆಂಬಲಿಗರೊಂದಿಗೆ ಬುಧವಾರ ಮೆರವಣಿಗೆಯಲ್ಲಿ ತೆರಳಿ ನಾಮಪತ್ರ ಸಲ್ಲಿಸಿದರು.

 ಅರಮನೆ ಮುಂಭಾಗದ ಕೋಟೆ ಆಂಜನೇಯಸ್ವಾಮಿ ದೇಗುಲದ ಮುಂಭಾಗ ಮೆರವಣಿಗೆಯು ಆರಂಭಗೊಂಡಿತು. ಅಲ್ಲಿಂದ ನಜರಬಾದ್ ಮಾರ್ಗವಾಗಿ ಸಿದ್ಧಾರ್ಥ ನಗರದ ಹೊಸ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ಸಾಗಿತು.

 ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.‌ ದೇವೇಗೌಡ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಕ್ಷೇತ್ರದ ಚುನಾವಣಾ ಉಸ್ತುವಾರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಂಸದ ಪ್ರತಾಪ ಸಿಂಹ, ಶಾಸಕ ಟಿ.ಎಸ್. ಶ್ರೀವತ್ಸ, ಜೆಡಿಎಸ್ ಶಾಸಕ ಜಿ.ಡಿ.‌ ಹರೀಶ್ ಗೌಡ, ಮಾಜಿ‌ ಶಾಸಕ ಕೆ.ಜಿ. ಬೋಪಯ್ಯ ಸಾಥ್‌ ನೀಡಿದರು.

ವಿವಿಧ ಕಲಾ ತಂಡಗಳೊಂದಿಗೆ ನೂರಾರು ಕಾರ್ಯಕರ್ತರು ಹೆಜ್ಜೆ ಹಾಕಿದರು.‌

ಮೆರವಣಿಗೆಯ ಹಿನ್ನೆಲೆಯಲ್ಲಿ ಕೆ.ಆರ್. ವೃತ್ತ, ಹಾರ್ಡಿಂಜ್ ವೃತ್ತ, ಸಯ್ಯಾಜಿರಾವ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ  ಉಂಟಾಗಿತ್ತು.

RELATED ARTICLES
- Advertisment -
Google search engine

Most Popular