ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಬುಧವಾರ ಚುನಾವಣಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಸಚಿವ ಕೆ.ವೆಂಕಟೇಶ್ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಅವರು ಉಪಸ್ಥಿತರಿದ್ದರು.