Tuesday, June 16, 2026
Google search engine

Homeಅಪರಾಧಮೈಸೂರು ಪಬ್ ಅಗ್ನಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ ; ನಿರ್ಲಕ್ಷ್ಯದ ಆರೋಪ

ಮೈಸೂರು ಪಬ್ ಅಗ್ನಿ ದುರಂತ: ಸುರಕ್ಷತಾ ನಿಯಮ ಉಲ್ಲಂಘನೆ ; ನಿರ್ಲಕ್ಷ್ಯದ ಆರೋಪ

ಮೈಸೂರು: ನಗರದ ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನವಾಗಿದ್ದು, ಹಲವರು ಗಾಯಗೊಂಡ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ದುರಂತದ ಬಳಿಕ ಪಬ್ ಮಾಲೀಕ ಹಾಗೂ ನಟ ಪ್ರೀತಂ ಪುನೀತ್ ಅವರ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣವೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ಪ್ರಾಥಮಿಕ ತನಿಖೆ ಪ್ರಕಾರ, ಪಬ್‌ನ ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೆ ವ್ಯವಹಾರ ನಡೆಸಲಾಗುತ್ತಿತ್ತು ಎನ್ನಲಾಗಿದೆ. ಅಗ್ನಿ ಸುರಕ್ಷತೆಗೆ ಅಗತ್ಯವಾದ ಮುಂಜಾಗ್ರತಾ ಕ್ರಮಗಳ ಕೊರತೆಯೂ ದುರಂತಕ್ಕೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪಬ್‌ನ ಒಳಾಂಗಣವನ್ನು ಒಣ ಹುಲ್ಲು ಹಾಗೂ ಮರದ ವಸ್ತುಗಳಿಂದ ಅಲಂಕರಿಸಲಾಗಿದ್ದು, ಬೆಂಕಿ ನಂದಿಸುವ ಸಿಲಿಂಡರ್‌ಗಳು ಮತ್ತು ತುರ್ತು ನಿರ್ಗಮನ ದ್ವಾರ ಸಮರ್ಪಕವಾಗಿ ಇರಲಿಲ್ಲ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಕೆಲವೇ ನಿಮಿಷಗಳಲ್ಲಿ ಬೆಂಕಿ ಇಡೀ ಮೇಲ್ಮಹಡಿಗೆ ವ್ಯಾಪಿಸಿ ಭಾರೀ ಹಾನಿ ಉಂಟುಮಾಡಿದೆ. ಡಾರ್ಜಿಲಿಂಗ್ ಮೂಲದ ಸಾಹಿನ್ ಹಾಗೂ ನೇಪಾಳ ಮೂಲದ ಪ್ರಕಾಶ್ ಮೃತಪಟ್ಟಿದ್ದಾರೆ. ಸೋನು, ರಮೇಶ್, ಮಹದೇವ ಪ್ರಸಾದ್, ಪ್ರಜ್ವಲ್ ಸೇರಿದಂತೆ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ಅವಘಡ ಸಂಭವಿಸಿದ ವೇಳೆ ಪ್ರೀತಂ ಪುನೀತ್ ಹಾಗೂ ಅವರ ಸ್ನೇಹಿತ ಅವಿನಾಶ್ ಕೂಡ ಸ್ಥಳದಲ್ಲಿದ್ದರು. ಇಬ್ಬರೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದರು. ಸೋಮವಾರದ ವಿಶೇಷ ಆಫರ್ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದ್ದ ಕಾರಣ ಗೊಂದಲ ಹೆಚ್ಚಾಗಿತ್ತು. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

RELATED ARTICLES
- Advertisment -
Google search engine

Most Popular