ಮೈಸೂರು: ಮೈಸೂರಿನ ವಿವೇಕಾನಂದ ನಗರದಲ್ಲಿ ಗುರುವಾರ ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 80 ವರ್ಷದ ಹಿರಿಯ ಬೈಕ್ ಸವಾರ ಪುರುಷೋತ್ತಮಯ್ಯ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅವರು ತಮ್ಮ ಬೈಕ್‌ನಲ್ಲಿ ಸಾಗುತ್ತಿದ್ದು, ಈ ವೇಳೆ ಹಿಂಬದಿಯಿಂದ ಬಂದ ಸಾರಿಗೆ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪುರುಷೋತ್ತಮಯ್ಯ ಬೈಕ್‌ನಿಂದ ನೆಲಕ್ಕೆ ಬಿದ್ದುಬಿಟ್ಟರು. ಈ ವೇಳೆ ಬಸ್‌ನ ಹಿಂಬದಿ ಚಕ್ರ ಅವರ ತಲೆಯ ಮೇಲೆ ಹರಿದು ತಕ್ಷಣವೇ ದಾರುಣ ಮರಣಕ್ಕೀಡಾದರು.
ಈ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಬಸ್ ಡ್ರೈವರ್‌ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.