ಮಂಡ್ಯ: ಡಿಹೆಚ್ಓ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೈದ್ಯಧಿಕಾರಿಗಳ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಎನ್.ಚಲುವರಾಯಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಹಲವು ವರ್ಷದ ಬೇಡಿಕೆ ಇತ್ತು, ಇಂದು ತಿರ್ಮಾನ ತೆಗೆದುಕೊಂಡು ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ಸಲ್ಲಿಸಿದ್ದೇವೆ. ಸರ್ಕಾರದಿಂದ ಹಲವು ಇಲಾಖೆಯ ಕಟ್ಟಡದ ಕಾಮಗಾರಿ ನಡೆಯುತ್ತಿದೆ ಎಂದರು.
ಭ್ರಣ ಹತ್ಯೆ ಪ್ರಕರಣ ರಾಜ್ಯದಲ್ಲಿ ಗಮನಸೆಳೆದಿದೆ. ಪ್ರಮುಖವಾಗಿ ಮಂಡ್ಯದಲ್ಲಿ ಭ್ರೂಣ ಹತ್ಯೆ ನಡೆಯುತ್ತಿರುವ ಬಗ್ಗೆ ಎಚ್ಚರಿಕೆ ವಹಿಸಬೇಕು. ವೈದ್ಯರೆಲ್ಲರು ಸಹ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಆರೋಗ್ಯ ತಪಾಸಣೆಗಳನ್ನು ಸಹ ಎಲ್ಲಾ ಕಡೆ ಮಾಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಡಿಹೆಚ್ಓ ಡಾ.ಮೋಹನ್ ಸೇರಿ ಹಲವರು ಭಾಗಿಯಾಗಿದ್ದರು.