ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ರೋಟರಿ ಮಿಡ್ ಟೌನ್ ಪಿರಿಯಾಪಟ್ಟಣ ವತಿಯಿಂದ ಡಿ.31ರಂದು ತಿಮಕಾಪುರ ಗ್ರಾಮದ ಸುರೇಶ್ ಅವರ ತೋಟದ ಜಮೀನಿನಲ್ಲಿ ರಾಷ್ಟ್ರೀಯ ರೈತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೋಟರಿ ವಲಯ 6 ರ ಸಹಾಯಕ ಗವರ್ನರ್ ತಿರುಮಲಾಪುರ ರಾಜೇಗೌಡ ತಿಳಿಸಿದರು.
ಅಂದು ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ತೋಟಗಾರಿಕೆ ಮಹಾವಿದ್ಯಾಲಯ ಯಲಚಹಳ್ಳಿಯ ಸಹಾಯಕ ಪ್ರಾಧ್ಯಾಪಕರಾದ ಡಾ.ರಾಮೇಗೌಡ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ, ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ ಯೋಜನೆಯ ಕಾರ್ಯದರ್ಶಿ ರತನ್ ತಮ್ಮಯ್ಯ, ವಲಯ ಸೇನಾನಿ ನಾಗರಾಜ್ ಬಾವಿಕಟ್ಟಿ ಭಾಗವಹಿಸಲಿದ್ದು ಅಧ್ಯಕ್ಷತೆಯನ್ನು ರೋಟರಿ ಮಿಡ್ ಟೌನ್ ಅಧ್ಯಕ್ಷ ಜಗನ್ ವಹಿಸಲಿದ್ದಾರೆ, ರೋಟೇರಿಯನ್ ಕೃಷ್ಣ ಆಗ್ರೋ ಅವರು ರೈತರಿಗೆ ಸಂರಕ್ಷತ ಕಿಟ್ ಗಳನ್ನು ನೀಡಲಿದ್ದಾರೆ, ಸಾರ್ವಜನಿಕರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ರೋಟರಿ ಮಿಡ್ ಟೌನ್ ಕಾರ್ಯದರ್ಶಿ ಚೇತನ್ ಕೋರಿದ್ದಾರೆ



