ಮಂಡ್ಯ: ಗೌರವಾನ್ವಿತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 11 ರಂದು (ನಾಳೆ) ರಾಷ್ಟ್ರೀಯ ಲೋಕ್-ಅದಾಲತ್‍ನ್ನು ಹಮ್ಮಿಕೊಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಬರುವಂತಹ 7 ತಾಲ್ಲೂಕುಗಳಲ್ಲಿಯೂ ಸಹ ಲೋಕ್ ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ನಿಟ್ಟಿನಲ್ಲಿ ಪೂರ್ವಭಾವಿ ಬೈಠೆಕ್‍ಗಳನ್ನು ನಡೆಸುತ್ತಿದ್ದು, ಆಸ್ತಿ ವಿವಾದಗಳನ್ನು ಒಳಗೊಂಡಂತೆ ಸಿವಿಲ್ ವ್ಯಾಜ್ಯಗಳು, ವಿಭಾಗದ ದಾವೆಗಳು, ಹಣವಸೂಲಾತಿ ದಾವೆಗಳು, ನಿರ್ದಿಷ್ಟ ಪರಿಹಾರ ಕಾಯ್ದೆಯಡಿ ದಾಖಲಿಸಿರುವ ದಾವೆಗಳು, (MVC) ಮೋಟಾರು ವಾಹನಗಳ ಪ್ರಕರಣಗಳು, MMRD ಪ್ರಕರಣಗಳು, ಜೀವನಾಂಶ ಪ್ರಕರಣ, ದಾಂಪತ್ಯ ಪುನರ್ ಸ್ಥಾಪನೆ ಪ್ರಕರಣಗಳು, ರಾಜಿ ಆಗಬಹುದಾದಂತಹಕ್ರಿಮಿನಲ್ ಪ್ರಕರಣಗಳನ್ನು ಮತ್ತು ಚೆಕ್ ಬೌನ್ಸ್ ಪ್ರಕರಣಗಳು, LACಪ್ರಕರಣಗಳು, Exectution ಪ್ರಕರಣಗಳನ್ನು ರಾಜಿಗೆ ತೆಗೆದುಕೊಂಡು ಆಯಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನ್ಯಾಯಾಲಯಗಳನ್ನು ರಚಿಸಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ.
ಲೋಕ ಅದಾಲತ್ ಪೀಠದಲ್ಲಿ ನ್ಯಾಯಾಧೀಶರು ಮತ್ತು ನುರಿತ ವಕೀಲರು ಕುಳಿತು ವಾದಿ-ಪ್ರತಿವಾದಿಗಳನ್ನು ಕೂರಿಸಿಕೊಂಡು ಅವರ ಮನವೊಲಿಸಿ ವ್ಯಾಜ್ಯಕ್ಕೆ ಅವರ ಸಮಕ್ಷಮದಲ್ಲೇ ಪರಿಹಾರ ಕಂಡುಕೊಳ್ಳಬಹುದಾಗಿರುತ್ತದೆ ಹಾಗೂ ಲೋಕ ಅದಾಲತ್ ಮೂಲಕ ವ್ಯಾಜ್ಯ ಇತ್ಯರ್ಥಪಡಿಸಿಕೊಂಡರೆ ನ್ಯಾಯಲಯದ ಶುಲ್ಕ ವಿಧಿಸುವುದಿಲ್ಲ ಈಗಾಗಲೇ ಕಟ್ಟಿರುವಂತಹ ನ್ಯಾಯಾಲಯದ ಶುಲ್ಕವನ್ನು ಸಹ ಮರಳಿ ನೀಡಲಾಗುತ್ತದೆ. ಹಾಗೂ ಲೋಕ ಅದಾಲತ್ ನಲ್ಲಿ ಪ್ರಕರಣಗಳು ಇತ್ಯರ್ಥಗೊಂಡರೆ ಅದರ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾಧ್ಯವಿಲ್ಲ. ಸದರಿ ತೀರ್ಮಾನವು ನ್ಯಾಯಾಲಯ ನೀಡಿದ ತೀರ್ಮಾನದಷ್ಟೇ ಮೌಲ್ಯ ಹೊಂದಿರುತ್ತದೆ.
ಲೋಕ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವಂತಹ ಪ್ರಕರಣಗಳ ಜೊತೆಗೆ, ನ್ಯಾಯಾಲಯಕ್ಕೆ ದಾಖಲಾಗುವ ಮುನ್ನ ಅಂದರೆ, ವ್ಯಾಜ್ಯಪೂರ್ವ ಪ್ರಕರಣಗಳು (ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕ ವಿವಾದ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಹಾಗೂ ಇತರೆ ಸಿವಿಲ್ ಪ್ರಕರಣಗಳು) ಇಂತಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಭಯ ಪಕ್ಷಗಾರರಿಗೆ
ನೋಟೀಸ್ ನೀಡಿ ಕರೆಸಿ ಪ್ರಾಧಿಕಾರದ ವತಿಯಿಂದ ಪೂರ್ವಭಾವಿ ಬೈಠಕ್ ನಡೆಸಿ ಅದಾಲತ್‍ನಲ್ಲಿ ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಹಾಗೂ ಇಂತಹ ಪ್ರಕರಣಗಳಿಗೆ ನ್ಯಾಯಾಲಯಕ್ಕೆ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ವಕೀಲರ ಮುಖಾಂತರ ಅಥವಾ ಖುದ್ದಾಗಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಪ್ರಕರಣವನ್ನು ರಾಜಿಮಾಡಿಕೊಳ್ಳಬಹುದಾಗಿರುತ್ತದೆ. ಇದರಿಂದ ಪ್ರಕರಣವು ಶೀಘ್ರವಾಗಿ ಇತ್ಯರ್ಥವಾಗುತ್ತದೆ ಹಾಗೂ ಹಣ ಹಾಗೂ ಅಮೂಲ್ಯವಾದ ಸಮಯ ಉಳಿತಾಯವಾಗುತ್ತದೆ.
ಈ ಬಾರಿಯ ಲೋಕ್-ಅದಾಲತ್‍ನಲ್ಲಿ ಕಕ್ಷಿದಾರರ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕಕ್ಷಿದಾರರಿಗೆ ಅನುಕೂಲವಾಗುವ ರೀತಿಯಲ್ಲಿ ನ್ಯಾಯಧಾನ ಮಾಡಬೇಕೆಂಬ ಇಚ್ಫೆಯಿಂದ ಈ ಮೇಲಿನ ಎಲ್ಲಾ ಪ್ರಕರಣಗಳನ್ನು ತೆಗೆದುಕೊಂಡಿದ್ದು, ಜನ ಸಾಮಾನ್ಯರು ಹಾಗೂ ಕಕ್ಷಿದಾರರು ಇದರ ಸದುಪಯೋಗವನ್ನು ಪಡೆದುಕೊಂಡು ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಲೋಕ್-ಅದಾಲತ್ ಅನ್ನು ಯಶಸ್ವಿಗೊಳಿಸಬೇಕಾಗಿ ತಿಳಿಸಲಾಗಿದೆ.



