Wednesday, May 13, 2026
Google search engine

Homeರಾಜ್ಯಅಸ್ಸಾಂನಲ್ಲಿ ಎನ್‌ಡಿಎ ಹ್ಯಾಟ್ರಿಕ್‌ : ಇಂದು ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ಸ್ವೀಕಾರ

ಅಸ್ಸಾಂನಲ್ಲಿ ಎನ್‌ಡಿಎ ಹ್ಯಾಟ್ರಿಕ್‌ : ಇಂದು ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಅಧಿಕಾರ ಸ್ವೀಕಾರ

ಗುವಾಹಟಿ : ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ರಾಜ್ಯದಲ್ಲಿ ಸತತ ಮೂರನೇ ಬಾರಿ ಸರ್ಕಾರ ರಚಿಸುತ್ತಿದ್ದು, ಇಂದು ಹಿಮಂತ ಬಿಸ್ವಾ ಶರ್ಮಾ ಅವರು ಎರಡನೇ ಅವಧಿಗೆ ಅಸ್ಸಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಗುವಾಹಟಿಯ ಖಾನಾಪಾರಾದ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11:40ಕ್ಕೆ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರು ಶರ್ಮಾ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಒಟ್ಟು 102 ಸ್ಥಾನಗಳನ್ನು ಗೆದ್ದು ದೊಡ್ಡ ಜಯ ಸಾಧಿಸಿದೆ. ಬಿಜೆಪಿ ಮಾತ್ರವೇ 82 ಸ್ಥಾನಗಳನ್ನು ಪಡೆದಿದ್ದು, ಮಿತ್ರಪಕ್ಷಗಳಾದ ಅಸ್ಸಾಂ ಗಣ ಪರಿಷತ್ ಮತ್ತು ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ ತಲಾ 10 ಸ್ಥಾನಗಳನ್ನು ಗೆದ್ದಿವೆ.

ಜಲಕ್ಬಾರಿ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸಿ ಗೆದ್ದಿರುವ ಹಿಮಂತ ಬಿಸ್ವಾ ಶರ್ಮಾ ಅವರು 89 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯ ಸಾಧಿಸಿದ್ದು, ಸತತ ಎರಡನೇ ಬಾರಿ ಮುಖ್ಯಮಂತ್ರಿಯಾಗುವ ಮೂಲಕ ಅವರು ಅಸ್ಸಾಂ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಕಾಂಗ್ರೆಸ್ಸೇತರ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

RELATED ARTICLES
- Advertisment -
Google search engine

Most Popular