Wednesday, June 18, 2025
Google search engine

Homeರಾಜ್ಯದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಹೊಸ ಜಿಲ್ಲಾಧಿಕಾರಿಗಳ ನೇಮಕ

ದಕ್ಷಿಣ ಕನ್ನಡ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಹೊಸ ಜಿಲ್ಲಾಧಿಕಾರಿಗಳ ನೇಮಕ

ಬೆಂಗಳೂರು: ರಾಜ್ಯ ಸರ್ಕಾರವು ಮಂಗಳವಾರ ಮಹತ್ವದ ವರ್ಗಾವಣೆ ಆದೇಶ ಹೊರಡಿಸಿದ್ದು, ಇದರಲ್ಲಿ ಹಲವಾರು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ವರ್ಗಾಯಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಐಜಿ ಮತ್ತು ಆಯುಕ್ತರಾಗಿ ವರ್ಗಾಯಿಸಲಾಗಿದೆ. ಅವರ ಸ್ಥಾನಕ್ಕೆ ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾದ ದರ್ಶನ್ ಎಚ್.ವಿ. ಅವರು ಹೊಸ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಉಡುಪಿ ಜಿಲ್ಲಾಧಿಕಾರಿಯಾಗಿ ಟಿ.ಕೆ. ಸ್ವರೂಪ ಅವರು, ಬಾಗಲಕೋಟೆ ಜಿಲ್ಲಾಧಿಕಾರಿಯಾಗಿದ್ದ ಕೆ.ಎಂ. ಜಾನಕಿ ಅವರು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ, ಹಾಸನದ ಸತ್ಯಭಾಮ ಅವರು ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿಯಾಗಿ ವರ್ಗಾಗೊಂಡಿದ್ದಾರೆ.

ಕೆ.ಎಸ್. ಲತಾ ಕುಮಾರಿ ಹಾಸನದ ಜಿಲ್ಲಾಧಿಕಾರಿ ಆಗಿದ್ದು, ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ರಾಷ್ಟ್ರೀಯ ಆರೋಗ್ಯ ಯೋಜನೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆಯುಕ್ತಾಲಯದ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ನಳಿನಿ ಅತುಲ್ ಅವರು ಯೋಜನೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ.

ಬಾಗಲಕೋಟೆಯ ಜಿಲ್ಲಾಧಿಕಾರಿಯಾಗಿ ಸಂಗಪ್ಪ, ಕೊಪ್ಪಳ ಜಿಲ್ಲಾಧಿಕಾರಿಯಾಗಿ ಸುರೇಶ್ ಬಿ. ಇಟ್ನಾಳ್, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಮುಖ್ಯಾಧಿಕಾರಿಯಾಗಿ ಡಾ. ನವೀನ್ ಭಟ್, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಎಂ.ಡಿ ಆಗಿ ಗರಿಮಾ ಪನ್ವರ್ ಅವರನ್ನು ನೇಮಕ ಮಾಡಲಾಗಿದೆ.

ಇದರೊಂದಿಗೆ ರಾಜ್ಯದ ವಿವಿಧ ಇಲಾಖೆಗಳ ಕಾರ್ಯನಿರ್ವಹಣೆಯಲ್ಲಿ ಹೊಸ ಮುಖಗಳು ಸ್ಥಾನ ಪಡೆದುಕೊಂಡಿದ್ದು, ಆಡಳಿತಾತ್ಮಕ ಗತಿಯಲ್ಲೂ ಬದಲಾವಣೆ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular