Thursday, January 1, 2026
Google search engine

Homeರಾಜ್ಯಹೊಸ ವರ್ಷಾಚರಣೆ: ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಹೊಸ ವರ್ಷಾಚರಣೆ: ಪೊಲೀಸರ ಕಾರ್ಯ ಶ್ಲಾಘಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:  ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್, ಬಿಗಿ ಭದ್ರತೆ ವಹಿಸಿದ ಪೊಲೀಸರ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಸುರಕ್ಷಿತವಾಗಿ ಹಾಗೂ ಅಷ್ಟೇ ಅದ್ಧೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ನಮ್ಮ ಕರ್ನಾಟಕ ಪೊಲೀಸರು ತೋರಿದ ಶಿಸ್ತು, ಸಮರ್ಪಣೆ ಮತ್ತು ಅವಿಶ್ರಾಂತ ಪ್ರಯತ್ನಗಳು ಶ್ಲಾಘನೀಯ.

ನಮ್ಮ ಪೊಲೀಸರ ವೃತ್ತಿಪರತೆ ಮತ್ತು ಸಾರ್ವಜನಿಕರ ಸುರಕ್ಷತೆಯೆಡೆಗಿನ ಬದ್ಧತೆಯು ನೈಜ ಸೇವಾ ಮನೋಭಾವದ ದ್ಯೋತಕ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹೊಸವರ್ಷವು ಎಲ್ಲ ಕನ್ನಡಿಗರಿಗೂ ಸುಖ, ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular