Thursday, June 18, 2026
Google search engine

Homeರಾಜಕೀಯಬಿಜೆಪಿಯಿಂದ ಕರೆ ಇಲ್ಲ: ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ ಎಂದ ಶಿವರಾಂ ಹೆಬ್ಬಾರ್

ಬಿಜೆಪಿಯಿಂದ ಕರೆ ಇಲ್ಲ: ಆತ್ಮಸಾಕ್ಷಿಗೆ ಮತ ಹಾಕಿದ್ದೇವೆ ಎಂದ ಶಿವರಾಂ ಹೆಬ್ಬಾರ್

ಬೆಂಗಳೂರು: ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿರುವುದಾಗಿ ಬಿಜೆಪಿ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಬಿಜೆಪಿಯಿಂದ ಸೌಜನ್ಯಕ್ಕೂ ಬೆಂಬಲ ಕೋರಲು ಯಾರೂ ಸಂಪರ್ಕಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಬೆಂಬಲ ಕೋರಿದ್ದರು. “ನಿಮ್ಮ ಬೆಂಬಲ ನಮಗೆ, ನಮ್ಮ ಬೆಂಬಲ ನಿಮಗೆ” ಎಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು ಎಂದು ಹೇಳಿದರು.

ಜೆಡಿಎಸ್‌ನಿಂದ ಯಾವುದೇ ಕರೆ ಬಂದಿಲ್ಲ. ಯತ್ನಾಳ್ ಅವರ ವಿಚಾರವೇ ಬೇರೆ, ನಮ್ಮ ವಿಚಾರವೇ ಬೇರೆ ಎಂದು ಸ್ಪಷ್ಟಪಡಿಸಿದ ಹೆಬ್ಬಾರ್, ತಾವು ಮತ್ತು ಶಾಸಕ ಎಸ್.ಟಿ. ಸೋಮಶೇಖರ್ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇವೆ ಎಂದು ತಿಳಿಸಿದರು. ಸಂಜೆ ಮತ ಎಣಿಕೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

RELATED ARTICLES
- Advertisment -
Google search engine

Most Popular