ಬೆಂಗಳೂರು : ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣವನ್ನು ಭರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಜಲ ಜೀವನ ಮಿಷನ್ 2.0 ಕುರಿತಂತೆ ಕೇಂದ್ರ ಜಲ ಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರಲ್ಲದೆ, ರಾಜ್ಯಕ್ಕೆ ಕಳೆದ ಎರಡು ವರ್ಷಗಳಿಂದ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಆದರೂ ಜಲ ಜೀವನ್ ಮಿಷನ್ ಯೋಜನೆಯಲ್ಲಿ ಕರ್ನಾಟಕ ಮಹತ್ವದ ಪ್ರಗತಿ ಸಾಧಿಸಿದೆ ಎಂದಿದ್ದಾರೆ.
ಇನ್ನು ದೇಶದಲ್ಲಿಯೇ ಎರಡನೇ ಅತ್ಯಂತ ಹೆಚ್ಚಿನ ಒಣಭೂಮಿ ಹೊಂದಿರುವ ರಾಜ್ಯವಾದ ಕರ್ನಾಟಕದಲ್ಲಿ ನೀರಿನ ಸಮಸ್ಯೆ ಇರುವುದಲ್ಲದೇ, ರಾಜ್ಯದ ಹಲವು ಭಾಗಗಳಲ್ಲಿ ಆರ್ಸೆನಿಕ್ ಹಾಗೂ ಫ್ಲೋರೈಡ್ ಮಿಶ್ರಣದ ಸಮಸ್ಯೆಯಿದೆ.
ಈ ಹಿನ್ನೆಲೆಯಲ್ಲಿ ಪ್ರತಿಯೊಂದು ಗ್ರಾಮೀಣ ಕುಟುಂಬಗಳಿಗೆ ಕುಡಿಯಲು ಯೋಗ್ಯವಾದ ನೀರನ್ನು ಒದಗಿಸಲು ಜಲಮೂಲಗಳ ಸುಧಾರಣೆ ಮತ್ತು ಬೃಹತ್ ನೀರಿನ ಸರಬರಾಜು ವ್ಯವಸ್ಥೆಗೆ ಆದ್ಯತೆ ನೀಡಿದ್ದೇವೆ. ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಕರ್ನಾಟಕ ಯಾವುದೇ ರಾಜಿ ಮಾಡಿಕೊಳ್ಳದೆ ಗುಣಮಟ್ಟವನ್ನು ಕಾಯ್ದುಕೊಂಡಿದೆ. ಈ ಯೋಜನೆಯಡಿ ಪ್ರತಿಯೊಂದು ಕಾಮಗಾರಿಗಳನ್ನು ಮೂರನೇ ಏಜೆನ್ಸಿ ಮೂಲಕ ಪರಿಶೀಲನೆ ನಡೆಸಲಾಗುತ್ತಿದ್ದು, ಪಾರದರ್ಶಕತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ಕೇಂದ್ರ ಸರ್ಕಾರ ಆಯವ್ಯಯದಲ್ಲಿ ಅನುದಾನ ಹಂಚಿಕೆ ಮಾಡಿದ್ದರೂ, ಕಳೆದ ಎರಡು ವರ್ಷಗಳಿಂದ ಕರ್ನಾಟಕಕ್ಕೆ ಹಣ ಬಿಡುಗಡೆಯಾಗಿಲ್ಲ. ಆದರೂ ರಾಜ್ಯ ಸರ್ಕಾರವೇ ಕೇಂದ್ರದ ಪಾಲಿನ ಹಣವನ್ನು ಭರಿಸಿ, ಯೋಜನೆ ಅನುಷ್ಠಾನ ಮುಂದುವರೆಯುವಂತೆ ನೋಡಿಕೊಂಡಿದೆ.
ಇದೇ ವೇಳೆ ನಾವು ಸದೃಢವಾದ ಸಾಂಸ್ಥಿಕ ಹಾಗೂ ನಿರ್ವಹಣಾ ವ್ಯವಸ್ಥೆಯನ್ನು ರೂಪಿಸಲು ಒತ್ತು ನೀಡಿದ್ದೇವೆ ಹಾಗೂ ಆಪರೇಷನ್ & ಮೈಂಟೆನೆನ್ಸ್ ನೀತಿಯನ್ನು ಅನುಷ್ಠಾನಗೊಳಿಸಿದ ಹಾಗೂ ಚಾಲನೆ ನೀಡಿದ ಮೊದಲ ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ಗ್ರಾಮೀಣ ಜಲ ನೈರ್ಮಲ್ಯ ಸಮಿತಿಗಳು ಸಕ್ರಿಯವಾಗಿದ್ದು, ಸಮಿತಿಗಳಲ್ಲಿ ಲಿಂಗ ಸಮಾತೋಲವನ್ನು ಕಾಯ್ದುಕೊಳ್ಳಲಾಗಿದೆ. ಕಾರ್ಯಾಚರಣೆಗೆಂದೇ ಮೀಸಲಾದ ಪಿಎಂಯು ಅನ್ನು ಸ್ಥಾಪಿಸಲಾಗಿದ್ದು, ಜೀವ ಜಲ ಅಪ್ಲಿಕೇಶನ್, ಜಿ.ಐ.ಎಸ್ ಆಧಾರಿತ ಭೂ ನಿರ್ವಹಣೆ, ಸಮಯೋಚಿತ ನಿರ್ವಹಣಾ ವ್ಯವಸ್ಥೆ ಮುಂತಾದ ಡಿಜಿಟಲ್ ನಾವೀನ್ಯತೆಗಳ ಮೂಲಕ ಆಡಳಿತ ವ್ಯವಸ್ಥೆಯನ್ನು ಸುಧಾರಣೆ ಮಾಡಲಾಗಿದೆ. 1.51 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ನೀರಿನ ಗುಣಮಟ್ಟ ಪರೀಕ್ಷೆ ಮಾಡುವ ಬಗ್ಗೆ ತರಬೇತಿ ನೀಡುವ ಮೂಲಕ ಸ್ಥಳೀಯ ನಾಯಕತ್ವಕ್ಕೆ ಮಹತ್ವ ನೀಡಿದೆ ಎನ್ನಲಾಗಿದೆ.
ಅಲ್ಲದೆ ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದ್ದು, ಮುಂಗಡ ವೆಚ್ಚದ ಮರುಪಾವತಿಗಳು ಸೇರಿದಂತೆ ಬಾಕಿಯಿರುವ ಎಲ್ಲಾ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.
ಇದೇ ವೇಳೆ ಎಲ್ಲ ಗ್ರಾಮೀಣ ನಿವಾಸಿಗಳಿಗೆ ಸುರಕ್ಷಿತ ಮತ್ತು ಸುಸ್ಥಿರ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೇಂದ್ರದ ಜೊತೆ ಕೆಲಸ ಮಾಡುವುದನ್ನು ಹೀಗೆಯೇ ಮುಂದುವರಿಸುತ್ತೇವೆ ಎಂಬ ಭರವಸೆಯನ್ನೂ ನೀಡಿದರು.