Thursday, May 29, 2025
Google search engine

Homeರಾಜ್ಯಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಯೋಧರ ಕ್ಯಾಂಟೀನ್ ಗೆ ಅಬಕಾರಿ ಸುಂಕ ಹಾಕುವುದಿಲ್ಲ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ “ಜೈ ಹಿಂದ್ ಸಭಾ” ಕಾರ್ಯಕ್ರಮದಲ್ಲಿ ಹೇಳಿದರು. ಯೋಧರ ಕ್ಯಾಂಟೀನ್‌ಗಳಿಗೆ ಅಬಕಾರಿ ಸುಂಕ ವಿಧಿಸದುದಾಗಿ ಘೋಷಿಸಿದ ಅವರು, ನಿವೃತ್ತ ಯೋಧರ ಕಲ್ಯಾಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

ಟೌನ್ ಹಾಲ್‌ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧರ ಕುಟುಂಬಗಳನ್ನು ಮತ್ತು ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಯೋಧರ ತ್ಯಾಗ ಮನೋಭಾವವನ್ನು ಶ್ಲಾಘಿಸಿದ ಸಿಎಂ, ದೇಶದ ರಕ್ಷಣೆಯ ಜವಾಬ್ದಾರಿ 140 ಕೋಟಿ ಜನರದ್ದು ಎಂದರು. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

ಮಾಜಿ ಯೋಧರ ನಿಗಮ ಸ್ಥಾಪನೆಗೆ ಚಿಂತನೆ

ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನೂರಾರು ಮಾಜಿ ಯೋಧರು ಮತ್ತು ಹುತಾತ್ಮರ ಕುಟುಂಬಗಳೊಂದಿಗೆ ವೇದಿಕೆ ಹಂಚಿಕೊಳ್ಳಲು ಅವಕಾಶ ಸಿಕ್ಕಿದ್ದು ನನ್ನ ಸುದೈವ ಎಂದರು.

ಕಾಂಗ್ರೆಸ್ ಪಕ್ಷವು ಯಾವಾಗಲೂ ದೇಶ ಮತ್ತು ಸಶಸ್ತ್ರ ಪಡೆಗಳ ಜೊತೆ ನಿಲ್ಲುತ್ತದೆ. ಅದಕ್ಕಾಗಿಯೇ ‘ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ’ ಎಂದು ಸದಾ ಹೇಳುತ್ತಿರುತ್ತೇವೆ ಎಂದು ತಿಳಿಸಿದರು.

ಮಾಜಿ ಯೋಧರ ಕಲ್ಯಾಣಕ್ಕಾಗಿ ಒಂದು ನಿಗಮ ಸ್ಥಾಪಿಸುವ ಬಗ್ಗೆ ಚಿಂತಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಚರ್ಚಿಸುವುದಾಗಿ ಅವರು ಹೇಳಿದರು. ಕರ್ನಾಟಕ ಸರ್ಕಾರವು ಮಾಜಿ ಯೋಧರು ಮತ್ತು ಅವರ ಕುಟುಂಬಗಳಿಗೆ ಶಕ್ತಿ ನೀಡಲು ಸದಾ ಸಿದ್ಧವಿದೆ ಎಂದು ಡಿಸಿಎಂ ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular