ಬೆಳಗಾವಿ : ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ.ಅಧಿಕಾರ ಹಂಚಿಕೆ ವಿಚಾರವಾಗಿ ಏನು ಮಾತುಕತೆ ಆಗಿದೆ ಎಂಬುದು ಗೊತ್ತಿಲ್ಲ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿ ಆಗಬೇಕೆಂದು ಬಯಸುವುದೂ ತಪ್ಪಲ್ಲ. ಆದರೆ ಸಿಎಂ ಕುರ್ಚಿ ಖಾಲಿ ಇಲ್ಲ. ಖಾಲಿಯಾದಾಗ ಯಾರು ಬಂದು ಕುಳಿತುಕೊಳ್ಳುತ್ತಾರೋ ನೋಡೋಣ ಎಂದರು.
‘ಸಚಿವ ಸಂಪುಟ ಪುನಾರಚನೆ ವೇಳೆ ಅರ್ಧದಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡುವಂತೆ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವೆಂಕಟೇಶ್, ಇದು ಕೆಲವರ ಅಭಿಪ್ರಾಯವಾಗಿದೆ. ನಾನು ನನ್ನ ಅಭಿಪ್ರಾಯ ತಿಳಿಸುತ್ತೇನೆ. ಆದರೆ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ’ ಎಂದರು.



