Tuesday, May 26, 2026
Google search engine

Homeರಾಜಕೀಯಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್

ಮೇಕೆದಾಟು ಯೋಜನೆ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಗಣಿಗ ರವಿಕುಮಾರ್

ಮಂಡ್ಯ: ತಮಿಳುನಾಡಿನಲ್ಲಿ ನೂರು ಮಂದಿ ಸಿಎಂ ಆದರೂ ಮೇಕೆದಾಟು ಡ್ಯಾಂ ನಿರ್ಮಾಣವನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಯ ಡಿಪಿಆರ್ ಈಗಾಗಲೇ ಸಿದ್ಧವಾಗಿದ್ದು, ಸುಪ್ರೀಂಕೋರ್ಟ್ ಕೂಡ ಕಾವೇರಿ ಬೋರ್ಡ್‌ನಲ್ಲಿ ತೀರ್ಮಾನ ಕೈಗೊಳ್ಳುವಂತೆ ಸೂಚಿಸಿದೆ ಎಂದರು. ನಮ್ಮ ಪರವಾಗಿ ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಯೋಜನೆ ಮುಂದುವರಿಯಲಿದೆ ಎಂದು ಹೇಳಿದರು.

ತಮಿಳುನಾಡಿನ ಪಾಲಿನ ನೀರನ್ನು ಕರ್ನಾಟಕ ನೀಡುತ್ತಿದೆ. ನಮ್ಮ ರಾಜ್ಯದಲ್ಲಿ ಡ್ಯಾಂ ಕಟ್ಟುವುದನ್ನು ತಡೆಯುವ ಹಕ್ಕು ಅವರಿಗೆ ಇಲ್ಲ ಎಂದರು. ಬಿಜೆಪಿ ರಾಜಕೀಯ ಮಾತುಗಳನ್ನೇ ಆಡುತ್ತದೆ. ಗೋವಾದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕಳಸ-ಬಂಡೂರಿ ಯೋಜನೆಗೆ ಅನುಮತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು. ಯಾರು ಏನೇ ಮಾಡಿದರೂ ಮೇಕೆದಾಟು ಡ್ಯಾಂ ನಿರ್ಮಾಣ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

RELATED ARTICLES
- Advertisment -
Google search engine

Most Popular