Wednesday, December 31, 2025
Google search engine

Homeದೇಶಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಪಾತ್ರವಿಲ್ಲ : ಚೀನಾಗೆ ಭಾರತ ತಿರುಗೇಟು

ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿಯ ಪಾತ್ರವಿಲ್ಲ : ಚೀನಾಗೆ ಭಾರತ ತಿರುಗೇಟು

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಚೀನಾ ಮಧ್ಯಸ್ಥಿಕೆ ವಹಿಸಿದೆ ಎಂಬ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದ್ದು, ಇದೀಗ ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.

ಇನ್ನೂ ಆಪರೇಷನ್ ಸಿಂಧೂರ ನಂತರ ಮೇ 10 ರಂದು ನಡೆದ ಕದನ ವಿರಾಮವನ್ನು ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ನೇರ ಮಾತುಕತೆಯ ನಂತರ ತಲುಪಲಾಯಿತು ಎಂದು ಭಾರತ ನಿರಂತರವಾಗಿ ಸಮರ್ಥಿಸಿಕೊಂಡಿದೆ.

ನಾವು ಈಗಾಗಲೇ ಅಂತಹ ಹಕ್ಕುಗಳನ್ನು ನಿರಾಕರಿಸಿದ್ದೇವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ವಿಷಯಗಳಲ್ಲಿ, ಮೂರನೇ ವ್ಯಕ್ತಿಗೆ ಯಾವುದೇ ಪಾತ್ರವಿಲ್ಲ. ಭಾರತ-ಪಾಕಿಸ್ತಾನ ಕದನ ವಿರಾಮವನ್ನು ಎರಡೂ ದೇಶಗಳ ಡಿಜಿಎಂಒಗಳು ನೇರವಾಗಿ ಒಪ್ಪಿಕೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ವೇಳೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಡೊನಾಲ್ಡ್ ಟ್ರಂಪ್ ಅವರನ್ನು ಟೀಕಿಸಿ, ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಬಿಕ್ಕಟ್ಟು ಸೇರಿದಂತೆ ಹಲವಾರು ಜಾಗತಿಕ ಸಂಘರ್ಷಗಳಿಗೆ ಬೀಜಿಂಗ್ ಮಧ್ಯಸ್ಥಿಕೆ ವಹಿಸಿದೆ ಎಂದು ಹೇಳಿಕೆಯ ನಂತರ ಭಾರತದಿಂದ ಈ ಪ್ರತಿಕ್ರಿಯೆ ಬಂದಿದ್ದು, ನಾವು ಉತ್ತರ ಮ್ಯಾನ್ಮಾರ್, ಇರಾನಿನ ಪರಮಾಣು ಸಮಸ್ಯೆ, ಪಾಕಿಸ್ತಾನ ಮತ್ತು ಭಾರತದ ನಡುವಿನ ಉದ್ವಿಗ್ನತೆ, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವಿನ ಸಮಸ್ಯೆಗಳು ಮತ್ತು ಕಾಂಬೋಡಿಯಾ ಮತ್ತು ಥೈಲ್ಯಾಂಡ್ ನಡುವಿನ ಇತ್ತೀಚಿನ ಸಂಘರ್ಷದಲ್ಲಿ ಮಧ್ಯಸ್ಥಿಕೆ ವಹಿಸಿದ್ದೇವೆ ಎಂದು ಚೀನಾದ ವಿದೇಶಾಂಗ ಸಚಿವರು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular