Wednesday, December 10, 2025
Google search engine

Homeರಾಜ್ಯಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ ವಿಷಯಗಳನ್ನೆಲ್ಲಾ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ ವಿಷಯಗಳನ್ನೆಲ್ಲಾ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಯಲ್ಲಿ ಶಾಸಕರು ಗ್ಯಾರಂಟಿ ಯೋಜನೆಗಳನ್ನು ಮಾತ್ರ ನಂಬಿಕೊಂಡು ಇರುವ ಬದಲು ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಬೇಕೆಂದು ಸಿಎಂ ಮತ್ತು ಡಿಸಿಎಂ ಅವರಿಗೆ ಮನವಿ ಮಾಡಿದ್ದಾರೆ ಎಂಬುದು ಸಾಕಷ್ಟು ಸುದ್ದಿಯಾಗಿದೆ.

ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ CLP ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು.

ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ ವಿಷಯಗಳನ್ನೆಲ್ಲಾ ಹೊರಗೆ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ, ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಏನೇ ಇದ್ದರೂ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೋ ಅದು ಆಗುತ್ತದೆ ಎಂದರು.

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸಿದ ಎಸ್‌ಐಟಿ ನ.20 ರಂದು ಬೆಳ್ತಂಗಡಿಯ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ತನಿಖಾ ಪ್ರಾಥಮಿಕ ವರದಿ ಸಲ್ಲಿಸಿದ್ದು, ಇದೊಂದು ಷಡ್ಯಂತ್ರ ಎಂದಿದೆ. ಈ ಬಗ್ಗೆ ಕೇಳಿದಾಗ ನಾನು ಚಾರ್ಜ್ ಶೀಟ್ ನೋಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

RELATED ARTICLES
- Advertisment -
Google search engine

Most Popular