ಬೆಂಗಳೂರು: ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರು “ಡಿಕೆ ಶಿವಕುಮಾರ್ ಸಿಎಂ ಆಗುವ ಕಾಲ ಹತ್ತಿರ ಇದೆ, 100 ಶಾಸಕರ ಬೆಂಬಲವಿದೆ” ಎಂಬ ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ. ಇದರ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಂದ ನೋಟಿಸ್ ಜಾರಿಯಾಗಿದೆ.
ಈ ನೋಟಿಸ್‌ನಲ್ಲಿ, ಮುಖ್ಯಮಂತ್ರಿಗಳ ಬದಲಾವಣೆ ಕುರಿತು ನೀಡಿರುವ ಹೇಳಿಕೆಗಳು ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡಿವೆ. ನಿಮ್ಮ ಈ ಹೇಳಿಕೆಗಳು ಪಕ್ಷದ ಶಿಸ್ತು ಉಲ್ಲಂಘನೆಗೂ ಕಾರಣವಾಗಿದೆ ಎಂದು ಉಲ್ಲೇಖಿಸಲಾಗಿದೆ.
ಹೀಗಾಗಿ ಈ ನೋಟಿಸ್ ತಲುಪಿದ ಒಂದು ವಾರದೊಳಗೆ ಸಮಜಾಯಿಷಿ ನೀಡುವಂತೆ ಸೂಚಿಸಲಾಗಿದೆ.