Wednesday, May 21, 2025
Google search engine

Homeರಾಜ್ಯಕೋಟಾ ಶ್ರೀನಿವಾಸ್‌ಗೆ ನೋಟಿಸ್, ಶೋಭಾ ಕರಂದ್ಲಾಜೆ ವಿರುದ್ಧ ದೂರು

ಕೋಟಾ ಶ್ರೀನಿವಾಸ್‌ಗೆ ನೋಟಿಸ್, ಶೋಭಾ ಕರಂದ್ಲಾಜೆ ವಿರುದ್ಧ ದೂರು

ಬೆಂಗಳೂರು : ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಮಾರ್ಚ್ ೩೦ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ ಪ್ರಚಾರ ಸಭೆ ನಡೆಸಿದ್ದ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿಗೂ ಮೇ ೨೭ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿ ಮಾಡಿ ಆದೇಶ ಹೊರಡಿಸಿದೆ. ಮತ್ತೊಂದೆಡೆ ತಮ್ಮ ಕಾರ್ಯಕ್ರಮದ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಮಲ್ಲೇಶ್ವರಂನಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಾಂಗ್ರೆಸ್ ಇಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

RELATED ARTICLES
- Advertisment -
Google search engine

Most Popular