ಕೆ.ಆರ್.ನಗರ: ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಕಾಮಗಾರಿಗೆ ಚಾಲನೆ ಹಾಗೂ ಅಭಿನಂದನಾ ಸಮಾರಂಭವನ್ನು ೨೩ರಂದು ಗುರುವಾರ ಬೆಳಗ್ಗೆ ೧೧ಕ್ಕೆ ಪಟ್ಟಣದ ಮೈಸೂರು-ಹಾಸನ ಮುಖ್ಯ ರಸ್ತೆಯಲ್ಲಿರುವ ಭವನದ ಖಾಲಿ ನಿವೇಶನದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ದಪ್ಪ ಹೇಳಿದರು.
ಪಟ್ಟಣದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು ಗುರುಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶಸ್ವಾಮಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಉದ್ಘಾಟನೆ ಮಾಡಲಿದ್ದು, ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಜಿ.ಪಂ.ಮಾಜಿ ಸದಸ್ಯ ರಾಜಯ್ಯ, ತಾ.ಪಂ. ಮಾಜಿ ಅಧ್ಯಕ್ಷ ಎಂ.ಹೆಚ್.ಸ್ವಾಮಿ, ಮಾಜಿ ಸದಸ್ಯರಾದ ನಂಜುಂಡ, ಶೋಭಕುಮಾರ್, ಜಾನಕಮ್ಮ, ಪುರಸಭೆ ಸದಸ್ಯರಾದ ಶಂಕರ್‌ಸ್ವಾಮಿ, ಸೌಮ್ಯಲೋಕೇಶ್, ಶಂಕರ್, ಮಾಜಿ ಅಧ್ಯಕ್ಷ ಗೀತಾಮಹೇಶ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಶಾಸಕ ಡಿ.ರವಿಶಂಕರ್‌ರವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಗುತ್ತದೆ ಆದ್ದರಿಂದ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕೋರಿದರು. ಸುದ್ದಿಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ರಾಜಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷರಾದ ನಂದೀಶ್, ಕಂಠಿಕುಮಾರ್, ಮುಖಂಡರಾದ ಶ್ರೀನಿವಾಸ್, ಚಲುವರಾಜು, ಮರಿಯಯ್ಯ, ಹೆಚ್.ಎನ್.ಸ್ವಾಮಿ, ಸಿದ್ದಯ್ಯ, ಶಂಕರ್ ಇದ್ದರು.