Monday, November 3, 2025
Google search engine

Homeರಾಜ್ಯನ. 28 ರಂದು ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ

ನ. 28 ರಂದು ಉಡುಪಿಯ ಶ್ರೀಕೃಷ್ಣಮಠಕ್ಕೆ ಪ್ರಧಾನಿ ಮೋದಿ ಭೇಟಿ

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರು 16 ವರ್ಷಗಳ ಬಳಿಕ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ 28 ರಂದು ಉಡುಪಿ ಶ್ರೀಕೃಷ್ಣ ದರ್ಶನ ಪಡೆದು, ಸಭಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್‌ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದು, ಅಷ್ಟಮಠಗಳಲ್ಲಿ ಒಂದಾದ ಪರ್ಯಾಯ ಪುತ್ತಿಗೆ ಮಠಕ್ಕೂ ಭೇಟಿ ನೀಡಲಿದ್ದಾರೆ. ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ.

ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತ ಪಾರಾಯಣ, ಗೀತೋತ್ಸವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಅಲ್ಲದೇ ಮಠದ ವ್ಯಾಪ್ತಿಯಲ್ಲಿ ಉಡುಪಿ ಶ್ರೀಕೃಷ್ಣನ ದರ್ಶನ ಪಡೆಯಲಿದ್ದು, ಭಕ್ತರು, ಸಾರ್ವಜನಿಕರ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀಕೃಷ್ಣನ ಕೃಪೆಗೆ ಪಾತ್ರರಾಗಲಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular