Friday, May 23, 2025
Google search engine

Homeಸಿನಿಮಾಮಾರ್ಚ್ 1 ರಂದು ‘ಪುರುಷೋತ್ತಮನ ಪ್ರಸಂಗ’ ಸಿನಿಮಾ ರಾಜ್ಯಾದ್ಯಂತ ತೆರೆ

ಮಾರ್ಚ್ 1 ರಂದು ‘ಪುರುಷೋತ್ತಮನ ಪ್ರಸಂಗ’ ಸಿನಿಮಾ ರಾಜ್ಯಾದ್ಯಂತ ತೆರೆ

ಮಂಗಳೂರು(ದಕ್ಷಿಣ ಕನ್ನಡ): ರಾಷ್ಟ್ರಕೂಟ ಪಿಚ್ಚರ್ಸ್‌ ಲಾಂಛನದಲ್ಲಿ ತಯಾರಾದ ಪುರುಷೋತ್ತಮನ ಪ್ರಸಂಗ ಸಿನಿಮಾ ಮಾರ್ಚ್ 1 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಎಂದು ನಿರ್ದೇಶಕ ದೇವದಾಸ್ ಕಾಪಿಕಾಡ್ ಹೇಳಿದ್ದಾರೆ.

ಅವರು ಇಂದು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

 ಒಂದೇ ಹಂತದಲ್ಲಿ ಸತತ 29 ದಿನಗಳ ಕಾಲ ಪುರುಷೋತ್ತಮನ ಪ್ರಸಂಗ ಸಿನಿಮಾದ ಚಿತ್ರೀಕರಣ ನಡೆದಿತ್ತು. ಮಂಗಳೂರು ಸುತ್ತಮುತ್ತಲಿನ ಬಜಪೆ, ಮುರನಗರ, ಕೆಂಜಾರ್ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಅಲ್ಲದೇ ದುಬೈನಲ್ಲಿ 7 ದಿನಗಳ ಕಾಲ ಚಿತ್ರೀಕರಣ ನಡೆದಿತ್ತು. ಉತ್ತಮ ಹಾಸ್ಯ ಕಥಾಹಂದರವನ್ನು ಒಳಗೊಂಡಿರುವ ಸಿನಿಮಾದಲ್ಲಿ ಪ್ರತಿಯೊಂದು ಪಾತ್ರವೂ ಇಲ್ಲಿ ಕತೆಗೆ ಪೂರಕವಾಗಿ ಪ್ರಾಮುಖ್ಯತೆಯನ್ನು ಪಡೆದಿದೆ. ಈ ಸಿನಿಮಾದ ಮೂಲಕ ಅಜಯ್ ಎಂಬ ನವ ನಟನನ್ನು ಹಾಗೂ ರಿಷಿಕಾ ನಾಯ್ಕ ಮತ್ತು ದೀಪಿಕಾ ಎಂಬುವರನ್ನು ನಟಿಯಾಗಿ ಕನ್ನಡಕ್ಕೆ ಪರಿಚಯಿಸಲಾಗಿದೆ. ಹಾಸ್ಯ ದಿಗ್ಗಜರನ್ನೊಳಗೊಂಡ ತಾರಾಗಣದಲ್ಲಿ ಬಹಳಷ್ಟು ಮಂದಿ ಹೊಸಬರಿಗೂ ಅವಕಾಶ ನೀಡಲಾಗಿದೆ ಎಂದರು.

RELATED ARTICLES
- Advertisment -
Google search engine

Most Popular