ಮೈಸೂರು: ಶ್ರೀರಂಗಪಟ್ಟಣದಲ್ಲಿರುವ ಚಂದ್ರವನ ಆಶ್ರಮ ದಾಸೋಹಕ್ಕೆ ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ಒಂದು ಲಕ್ಷ ದೇಣಿಗೆಯನ್ನು ಚೆಕ್ ಮುಖಾಂತರ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳ ರವರಿಗೆ ಹಸ್ತಾಂತರಿಸಲಾಯಿತು. ನಂತರ ಮಾತನಾಡಿದ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿಗಳು ಜೀವದಾರ ರಕ್ತ ನಿಧಿ ಕೇಂದ್ರ ಯಶಸ್ವಿಯಾಗಿ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದ್ದಾರೆ, ಸಾಮಾಜಿಕ ಹಾಗೂ ಧಾರ್ಮಿಕತೆ ಹಾಗೂ ಸನಾತನ ಧರ್ಮದ ಕೆಲಸವನ್ನು ಮಾಡುತ್ತಿರುವುದು ಬಹಳ ಸಂತೋಷ ತಂದುಕೊಟ್ಟಿದೆ, ಜೀವಧಾರ ರಕ್ತ ನಿಧಿ ಕೇಂದ್ರ ರಾಷ್ಟ್ರಮಟ್ಟದಲ್ಲಿ ಯಶಸ್ವಿ ಕಾಣಲಿ ಎಂದು ಆಶಿಸಿದರು.
ಭಾರತೀಯ ಪರಂಪರೆಯಲ್ಲಿ ಮಠಗಳ ಪಾತ್ರ ಅಮೋಘವಾಗಿದ್ದು, ಪ್ರತಿಯೊಂದು ಮಠಗಳಿಗೆ ಭಕ್ತರೇ ಆಧಾರ ಸ್ಥಂಬ, ಧರ್ಮ ಪರಂಪರೆ ಉಳಿಸಿಕೊಂಡು ಬರುವಲ್ಲಿ ಮಠಮಾನ್ಯಗಳ ಸೇವೆ ಅಮೋಘ, ಹೆತ್ತ ತಂದೆ ತಾಯಿ ಮತ್ತು ಋಣ ತೀರಿಸಲು ಸಾಧ್ಯವಿಲ್ಲ ಎಂದರು.
ಭಾರತೀಯ ಸಂಸ್ಕೃತಿಯಲ್ಲಿ ಅನಾದಿ ಕಾಲದಿಂದ ಗುರುಪೂರ್ಣಿಮೆ ಆಚರಿಸಲಾಗುತ್ತಿದೆ, ಪ್ರತಿಯೊಂದರ ಹಿಂದೆ ಗುರುವಿನ ಅವಶ್ಯಕತೆವಿದ್ದು, ಗುರುವಿನ ಆಶೀರ್ವಾದವಿದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಜಯಪ್ರಕಾಶ್, ಪರೀಕ್ಷಿತ್ ರಾಜ ಅರಸ್, ಮಂಜುನಾಥ್ ಹಾಗೂ ಇನ್ನಿತರರು ಹಾಜರಿದ್ದರು.