Saturday, February 7, 2026
Google search engine

Homeಸ್ಥಳೀಯಪ್ರೇಮಿಗಳ ದಿನದಂದು ಫೆ,14: ನಂದಿ ಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ತಡೆ

ಪ್ರೇಮಿಗಳ ದಿನದಂದು ಫೆ,14: ನಂದಿ ಬೆಟ್ಟ ಪ್ರವೇಶಕ್ಕೆ ತಾತ್ಕಾಲಿಕ ತಡೆ

ಚಿಕ್ಕಬಳ್ಳಾಪುರ : ಪ್ರೇಮಿಗಳ ದಿನದಂದು ಇತಿಹಾಸ ಪ್ರಸಿದ್ಧ ತಾಲ್ಲೂಕಿನ ನಂದಿ ಗಿರಿಧಾಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಪ್ರೇಮಿಗಳು ಆಗಮಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಫೆ.14ರಂದು ಪ್ರವೇಶ ನಿರ್ಬಂಧಿಸಲಾಗಿದೆ.

ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ನಂದಿ ಗಿರಿಧಾಮಕ್ಕೆ ಭೇಟಿ ನೀಡಿ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ. ಅದರಲ್ಲೂ ವೀಕೆಂಡ್‌ನಲ್ಲಿ ಜನಜಾತ್ರೆಯೇ ಸೇರುತ್ತದೆ.

ಪ್ರೇಮಿಗಳ ದಿನದಂದು ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಮಿಗಳು ಆಗಮಿಸುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಅಂದು ಬೆಳಗ್ಗೆ 6 ರಿಂದ ಸಂಜೆ 6ರ ವರೆಗೆ ಬೆಟ್ಟಕ್ಕೆ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

RELATED ARTICLES
- Advertisment -
Google search engine

Most Popular