Tuesday, May 20, 2025
Google search engine

Homeರಾಜ್ಯಆಪರೇಷನ್‌ ಸಿಂಧೂರ್‌ ಪಾಕ್‌ಗೆ ಎಚ್ಚರಿಕೆಯ ಗಂಟೆ: ಸಿಎಂ

ಆಪರೇಷನ್‌ ಸಿಂಧೂರ್‌ ಪಾಕ್‌ಗೆ ಎಚ್ಚರಿಕೆಯ ಗಂಟೆ: ಸಿಎಂ

ಬೆಂಗಳೂರು: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ. ದೇಶದ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಆಪರೇಷನ್ ಸಿಂಧೂರ ಹೆಸರಿನಲ್ಲಿ ಸುಮಾರು 9 ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿದೆ. ಕೇವಲ ಉಗ್ರಗಾಮಿಗಳ ನೆಲೆಗಳ ಮೇಲೆ ಮಾತ್ರ ದಾಳಿ ನಡೆಸಲಾಗಿದೆ. ನಮ್ಮ ಸೈನಿಕರು ಉಗ್ರರ ನೆಲೆಗಳನ್ನು ಪತ್ತೆ ಹಚ್ಚಿ ದಾಳಿ ಮಾಡಿದ್ದು, ಅಮಾಯಕ ಜನರ ಸಾವು ನೋವು ತಪ್ಪಿಸಿದ್ದಾರೆ. ನಮ್ಮ ಸೈನಿಕರ ಕಾರ್ಯದಕ್ಷತೆಗೆ ದೊಡ್ಡ ಸಲಾಂ. ಈ ದಾಳಿಯನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಅಮಾಯಕ 26ಜನ ಹತ್ಯೆ ನಡೆಸಿದ ಉಗ್ರರನ್ನು ಬೆಂಬಲಿಸುವವರು, ಸಾಕುವವರು ಸಹ ಪಾಕಿಸ್ತಾನದವರೇ ಎಂಬುವುದು ಸ್ಪಷ್ಟವಾಗಿದೆ. ನಾವು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ. ರಾಜ್ಯದಲ್ಲಿ ಸುರಕ್ಷತೆಯ ಕುರಿತು ಎಲ್ಲಾ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

ಉಗ್ರರ ಮೇಲಿನ ದಾಳಿ ಹಿನ್ನೆಲೆಯಲ್ಲಿ ಸಂವಿಧಾನ ಉಳಿಸಿ ಅಡಿಯಲ್ಲಿ ರಾಯಚೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಕಾರ್ಯಕ್ರಮನ್ನು ರದ್ದುಗೊಳಿಸಲಾಗಿದೆ ಎಂದರು. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್ ಎಂದರು.

RELATED ARTICLES
- Advertisment -
Google search engine

Most Popular