ಕೋಲ್ಕತಾ: ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಕೋಲ್ಕತಾ ಹೈಕೋರ್ಟ್ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.
ಘಟನೆಯನ್ನು ಬಿಜೆಪಿ ಮತ್ತು ಸಿಪಿಎಂತಮ್ಮ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಎಂದ ದೀದಿ ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಆದರೂ ದುರುದ್ದೇಶಪೂರಿತ ಪ್ರಚಾರ ನಡೆಯುತ್ತಿದೆ. ನಿಮಗೆ ಬೇಕಿದ್ದರೆ ನನ್ನನ್ನು ನಿಂದಿಸಿ. ಅದರೆ ರಾಜ್ಯವನ್ನಲ್ಲಎಂದರು. ಅಲ್ಲದೇ ಇದೇ ಸಂದರ್ಭದಲ್ಲಿ ಕಳೆದ ಮೂರು ದಿನಗಳಿಂದ ವೈದ್ಯರು ನಡೆಸುತ್ತಿರುವ ಮುಷ್ಕರವನ್ನು ಅಂತ್ಯಗೊಳಿಸಿ, ಸೇವೆಗೆ ಹಾಜರಾಗುವಂತೆ ಮನವಿ ಮಾಡಿಕೊಂಡರು.