Sunday, January 11, 2026
Google search engine

Homeರಾಜ್ಯಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪ : ತನಿಖೆಗೆ ಮೂರು ವಿಶೇಷ ತಂಡ ರಚನೆ

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಆರೋಪ : ತನಿಖೆಗೆ ಮೂರು ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯಸಭೆ ಚುನಾವಣೆಯ ಫಲಿತಾಂಶದ ನಂತರ ಸಂಭ್ರಮಾಚರಣೆ ನಡೆಸುತ್ತಿದ್ದ ವೇಳೆ ವಿಧಾನಸೌಧದ ಆವರಣದಲ್ಲಿ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶೇಖರ್ ತಿಳಿಸಿದ್ದಾರೆ.

ತಡರಾತ್ರಿವರೆಗೂ ಠಾಣೆಯಲ್ಲೇ ಉಳಿದುಕೊಂಡಿದ್ದ ಅವರು ಪೊಲೀಸ್ ಸಿಬ್ಬಂದಿಯ ಜೊತೆ ಚರ್ಚೆ ನಡೆಸಿ ಮಾಹಿತಿ ಕಲೆ ಹಾಕಿದ್ದರು. ಪ್ರಕರಣದ ಮುಂದಿನ ಆಯಾಮ ಹಾಗೂ ತನಿಖೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಿದ್ದರು.
ವಿಜೇತ ಅಭ್ಯರ್ಥಿ ನಾಸಿರ್ ಹುಸೇನ್ ಜೊತೆ ಬಂದವರ ಪಟ್ಟಿ ಸಂಗ್ರಹಿಸಲಾಗಿದ್ದು, ಟೆಕ್ನಿಕಲ್ ಅನಾಲಿಸಿಸ್ ಹಾಗೂ ವಿಡಿಯೋಗಳನ್ನು ಪರಿಗಣಿಸುವ ಕಾರ್ಯ ಮಾಡಲಾಗುತ್ತಿದೆ. ಸದ್ಯ ವಿಧಾನಸೌಧ ಪೊಲೀಸರು ಘೋಷಣೆ ಕೂಗಿದಾತನ ಶೋಧ ನಡೆಸುತ್ತಿದ್ದಾರೆ. ಘೋಷಣೆ ಕೂಗಿದ ಸಂದರ್ಭದಲ್ಲಿ ನಾಸೀರ್ ಹುಸೇನ್ ಬಳಿ ಇದ್ದ ವ್ಯಕ್ತಿಗಳನ್ನು ಕರೆಸಿ ಇಂದು ವಿಚಾರಣೆ ನಡೆಸುವ ಸಾಧ್ಯತೆ ಇದೆ.

RELATED ARTICLES
- Advertisment -
Google search engine

Most Popular