ಮೈಸೂರು: ನಗರದ ಡಿ ಆರ್ ಸಿ ಮಾಲ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ರಾತ್ರಿ 9:55 ಸಮಯದಲ್ಲಿ ಕಿಡಿಗೇಡಿಗಳಿಂದ ಕೇಳಿ ಬಂದಿದೆ.
ನಗರದ ಗೋಕುಲಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಬಿಎಮ್ಎಲ್ಮಾಲ್ ನಲ್ಲಿ ಬ್ಯಾಡ್ ನ್ಯೂಸ್ ಚಿತ್ರವು ಡಿ ಆರ್ ಸಿ ಫಿಲಂಸ್ ನಲ್ಲಿ ರಿಲೀಸ್ ಆಗಿದ್ದು ಫಿಲಂ ಪ್ರಾರಂಭದಲ್ಲಿ ವಂದೇ ಮಾತರಂ ಹಾಡು ಬರುವಾಗ ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.
ಘೋಷಣೆ ಕೂಗಿದ ನಂತರ ಪರ ವಿರೋಧಿಗಳ ಮಾತಿನ ಚಕಮಕಿ ಜೋರಾಗಿ ನಡೆದಿದ್ದು, ಸ್ಥಳಕ್ಕೆ ಡಿ ಆರ್ ಸಿ ಫಿಲಂ ಸೆಕ್ಯೂರಿಟಿ ಹಾಗೂ ಪೊಲೀಸರು ಮಧ್ಯಸ್ಥಿಕೆ ವಹಿಸಿ ಘೋಷಣೆ ಕೂಗಿದವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಸಂಬಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ಸ್ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ಮುಂದುವರೆಯಲಿದೆ.