Tuesday, May 20, 2025
Google search engine

Homeರಾಜ್ಯಸುದ್ದಿಜಾಲಸುಪ್ರೀಂ ತೀರ್ಪು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿಯಿಂದ ಪಂಜಿನ ಮೆರವಣಿಗೆ

ಸುಪ್ರೀಂ ತೀರ್ಪು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿಯಿಂದ ಪಂಜಿನ ಮೆರವಣಿಗೆ

ಶ್ರೀರಂಗಪಟ್ಟಣ: ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಶನಿವಾರ ಸಂಜೆ ಪಟ್ಟಣದಲ್ಲಿ ಪಂಜಿನ ಮೆರವಣಿಗೆ ನಡೆಸಿದರು.

ರೈತ ನಾಯಕ ಕೆ.ಎಸ್‌. ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಟ್ಟಣದ ಕುವೆಂಪು ಪ್ರತಿಮೆ ಬಳಿಯಿಂದ ಬೆಂಗಳೂರು– ಮೈಸೂರು ಹೆದ್ದಾರಿ ವೃತ್ತದ ವರೆಗೆ ಪಂಜುಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು. ಹೆದ್ದಾರಿಯ ಉದ್ದಕ್ಕೂ ಸಾಲು ಗಟ್ಟಿ ನಿಂತು ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ಬಳಕೆ ವಿಚಾರದಲ್ಲಿ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ರಾಜ್ಯದ ಪರ ವಕೀಲರು ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ಗೆ ವಾಸ್ತವ ಸಂಗತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲರಾಗಿದ್ದಾರೆ. ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ರಾಜ್ಯ ಸರ್ಕಾರ ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಕೆ.ಎಸ್‌. ನಂಜುಂಡೇಗೌಡ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ. ಕೃಷ್ಣೇಗೌಡ, ಪ್ರಧಾನ ಕಾರ್ಯದರ್ಶಿ ದರ್ಶನ್, ಮಹದೇವಪುರ ಕೃಷ್ಣ, ಖಜಾಂಚಿ ಮಹದೇವು, ಹನಿಯಂಬಾಡಿ ನಾಗರಾಜು, ಕೆ.ಶೆಟ್ಟಹಳ್ಳಿ ಮಹಲಿಂಗು, ಬಲ್ಲೇನಹಳ್ಳಿ ಮಂಜುನಾಥ್‌, ದೊಡ್ಡಪಾಳ್ಯ ಜಗದೀಶ್‌, ಕೆ. ಜಯರಾಂ, ದರಸಗುಪ್ಪೆ ಸುರೇಶ್‌, ಚಂದಗಾಲು ಶಿವಣ್ಣ, ಮೇಳಾಪುರ ಜಯರಾಮೇಗೌಡ, ಕೆಂಪೇಗೌಡ, ಲಕ್ಷ್ಮಿನಾರಾಯಣ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular